ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೋಂದಣಿ-ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಈ ಸುದ್ದಿಯನ್ನು ಶೇರ್ ಮಾಡಿ

SSLC-Exams

ಬೆಂಗಳೂರು, ಸೆ.27 – ಮುಂದಿನ 2018 ಮಾರ್ಚ್ ಅಥವಾ ಮೇನಲ್ಲಿ ನಡೆಯಲಿರುವ ಎಸ್‍ಎಸ್‍ಎಲïಸಿ (10ನೇ ತರಗತಿ) ವಾರ್ಷಿಕ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ನೋಂದಣಿ, ಶುಲ್ಕ ಪಾವತಿಸುವ ದಿನಾಂಕವನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವಿಸ್ತರಿಸಿ ಆದೇಶ ಹೊರಡಿಸಿದೆ.
ಖಾಸಗಿ ಅಭ್ಯರ್ಥಿಗಳು ಜಿಲ್ಲಾ ಉಪ ನಿರ್ದೇಶಕರ ಕಚೇರಿ (ಡಿಡಿಪಿಐ)ಯಲ್ಲಿ ನೋಂದಣಿ ಮಾಡಿಕೊಳ್ಳಲು ಕೊನೆಯ ದಿನಾಂಕವನ್ನು ಅ.9, 2017ರವರೆಗೆ ವಿಸ್ತರಿಸಲಾಗಿದೆ.

ಪ್ರಸಕ್ತ ಸಾಲಿನ ಅಭ್ಯರ್ಥಿಗಳು, ಖಾಸಗಿ ಹಾಗೂ ಪುರಾವರ್ತಿತ ಅಭ್ಯರ್ಥಿಗಳು ಶಾಲೆಗಳಲ್ಲಿ ಪರೀಕ್ಷಾ ಶುಲ್ಕವನ್ನು ಪಾವತಿಸಲು 2017 ಅಕ್ಟೋಬರ್ 10ರವರೆಗೆ ವಿಸ್ತರಿಸಲಾಗಿದೆ. ಹಾಗೂ ಪರೀಕ್ಷಾ ಶುಲ್ಕವನ್ನು ಮೂಲಕ ಬ್ಯಾಂಕಿಗೆ ತುಂಬಲು ಅಕ್ಟೋಬರ್ 11, ಮತ್ತು ನಾಮಿನಲï ರೋಲï ಪ್ರಸ್ತಾವನೆ ಹಾಗೂ ಬ್ಯಾಂಕ್ ಚಲನ್ ನ ಮೂಲ ಪ್ರತಿ ಶಾಲೆಗಳು ಪರೀಕ್ಷಾ ಮಂಡಳಿಗೆ ತಲುಪಿಸಲು ಅಕ್ಟೋಬರ್ 12,2017 ಕೊನೆ ದಿನವಾಗಿದೆ ಎಂದು ರಾಜ್ಯದ ಜಿಲ್ಲಾ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೂಚನೆ ನೀಡಿದೆ.

 

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin