ಒಂಬತ್ತನೇ ತರಗತಿ ಬಾಲಕನ ಬರ್ಬರ ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

murder-student
ಮಂಡ್ಯ, ಮೇ 16- ಶಿಕ್ಷಕಿಯೊಬ್ಬರ 16 ವರ್ಷದ ಮಗನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೆಆರ್ ಪೇಟೆ ಪಟ್ಟಣದಲ್ಲಿ ನಡೆದಿದೆ.
ಕೆಆರ್ ಪೇಟೆ ಪಟ್ಟಣದ ಸಾಧುಗೋನಹಳ್ಳಿ ರಸ್ತೆಯ ಎನ್‍ಜಿಒ ಬಡಾವಣೆಯ ನಿವಾಸಿಗಳಾದ ಲೋಕೇಶ್ ಮತ್ತು ಸುಜಾತಾ ಎಂಬುವರ ಪುತ್ರ ಶಶಾಂಕ್ ಕೊಲೆಗೀಡಾದ ಬಾಲಕ.ಶಶಾಂಕ್ ತೇಗನಹಳ್ಳಿಯ ಆಶೀರ್ವಾದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 9ನೆ ತರಗತಿ ವ್ಯಾಸಂಗ ಮಾಡುತ್ತಿದ್ದನೆಂದು ಪೊಲೀಸರು ತಿಳಿಸಿದ್ದಾರೆ.ತಾಯಿ ಸುಜಾತಾ ತಾಲೂಕಿನ ಬೊಮ್ಮನಹಳ್ಳಿ ಸರ್ಕಾರಿ ಶಾಲೆ ಶಿಕ್ಷಕಿ. ಶಶಾಂಕ್‍ನನ್ನು ದುಷ್ಕರ್ಮಿಗಳು ಇಂದು ಬೆಳಗ್ಗೆ ಕೆಆರ್ ಪೇಟೆ ಪಟ್ಟಣದ ಹೊರವಲಯದ ಹೇಮಗಿರಿ ರಸ್ತೆಯ ಸರ್ಕಾರಿ ನೌಕರರ ಕಾಲೋನಿಯ ನಿರ್ಜನ ಪ್ರದೇಶದಲ್ಲಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಕೆಆರ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin