ಒಟ್ಟಿಗೆ ಪ್ರಮಾಣ ವಚನ ಸ್ವೀಕರಿಸಿದ ಡಿಕೆಶಿ-ಎಚ್‍ಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--01
ಬೆಂಗಳೂರು,ಮೇ 19-ಇದುವರೆಗೆ ವಿರೋಧಿಗಳಾಗಿದ್ದ ಎಚ್.ಡಿ.ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್ ಇಂದು ಒಟ್ಟಿಗೆ ಪ್ರಮಾಣ ವಚನ ಸ್ವೀಕರಿಸಿದ್ದು ವಿಶೇಷ. ವಿಧಾನಸಭೆ ಚುನಾವಣೆ ಮುಗಿದು ಫಲಿತಾಂಶ ಬಂದ ನಂತರ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದು , ಕಾಕತಾಳೀಯ ಎಂಬಂತೆ ಇಂದು ಇಬ್ಬರು ಒಟ್ಟಿಗೆ ಪ್ರಮಾಣ ವಚನ ಸ್ವೀಕರಿಸಿದರು.

ಕನಕಪುರ, ಚನ್ನಪಟ್ಟಣ ಎರಡೂ ಕ್ಷೇತ್ರಗಳು ರಾಮನಗರ ಜಿಲ್ಲೆಗೆ ಸೇರಿರುವುದರಿಂದ ಪ್ರಮಾಣ ವಚನ ಸ್ವೀಕರಿಸಲು ಜಿಲ್ಲಾವಾರು , ಕ್ಷೇತ್ರವಾರು ಹೆಸರು ಕೂಗಿದಾಗ ಕ್ರಮ ಸಂಖ್ಯೆ ಹಿಂದೆ ಮುಂದೆ ಬಂದುದ್ದರಿಂದ ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ಒಟ್ಟಿಗೆ ಪ್ರಮಾಣವಚನ ಸ್ವೀಕರಿಸಿದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin