ಕರಡಿ ದಾಳಿಗೆ ಗರ್ಭಿಣಿ ಮಹಿಳೆ ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

Laradi
ಕನಕಪುರ, ಜ.18- ಶೌಚಾಲಯಕ್ಕೆಂದು ತೆರಳಿದ್ದ ಗರ್ಭಿಣಿ ಮೇಲೆ ಕರಡಿ ದಾಳಿ ನಡೆಸಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಚೌಕಸಂದ್ರ ಗ್ರಾಮದ ನಿವಾಸಿ ಸುಮಾಬಾಯಿ (25) ಸಾವನ್ನಪ್ಪಿದ ಗರ್ಭಿಣಿ. ಸುಮಾಬಾಯಿ ಏಳು ತಿಂಗಳ ಗರ್ಭಿಣಿಯಾಗಿದ್ದು, ಇಂದು ಮುಂಜಾನೆ ಶೌಚಾಲಯಕ್ಕೆಂದು ಮನೆಯಿಂದ ಹೊರಗೆ ಬಂದಿದ್ದಾರೆ.

ಈ ವೇಳೆ ಬೇಲಿ ಬಳಿ ಅವಿತು ಕುಳಿತಿದ್ದ ಕರಡಿಯೊಂದು ಏಕಾಏಕಿ ದಾಳಿ ನಡೆಸಿದೆ. ಆಕೆಯ ಕಿರುಚಾಟದಿಂದ ಪತಿ ಮನೆಯಿಂದ ಹೊರಗೆ ಬಂದಿದ್ದಾರೆ. ಕರಡಿಯು ಆಕೆಯ ಕುತ್ತಿಗೆ, ಮೈ ಮೇಲೆ ಗಂಭೀರ ಗಾಯಗೊಳಿಸಿದ್ದು, ರಕ್ತಸ್ರಾವದಿಂದ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು, ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin