ಕಲ್ಲಪ್ಪ ಹಂಡಿಬಾಗ್ ಆತ್ಮಹತ್ಯೆ ಪ್ರಕರಣ : ಪ್ರವೀಣ್ ಖಾಂಡ್ಯಾ ಸಿಐಡಿ ವಶಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

Kallapa

ಚಿಕ್ಕಮಗಳೂರು, ಜ.7- ಡಿವೈಎಸ್ಪಿ ಕಲ್ಲಪ್ಪ ಹಂಡಿಬಾಗ್ ಆತ್ಮಹತ್ಯೆ ಮತ್ತು ತೇಜಸ್‍ಗೌಡ ಅಪಹರಣ ಪ್ರಕರಣಗಳ ಪ್ರಮುಖ ಆರೋಪಿ ಪ್ರವೀಣ್ ಖಾಂಡ್ಯಾನನ್ನು ಇಲ್ಲಿನ ಜೆಎಂಎಫ್‍ಸಿ ನ್ಯಾಯಾಲಯ ಜ.15ರವರೆಗೆ ಸಿಐಡಿ ವಶಕ್ಕೆ ಒಪ್ಪಿಸಿದೆ. ಈ ಮೊದಲು ಖಾಂಡ್ಯಾಗೆ ನ್ಯಾಯಾಲಯ ಜಾಮೀನು ನೀಡಿತ್ತು. ಆದರೆ 2011ರ ದತ್ತ ಜಯಂತಿ ಸಂದರ್ಭ ನಗರ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿತ್ತು. ಈ ಪ್ರಕರಣ ವಿಚಾರಣೆಗೆ ಖಾಂಡ್ಯಾ ಹಾಜರಾಗಿರಲಿಲ್ಲ. ಈ ಎಲ್ಲಾ ಪ್ರಕರಣಗಳಿಗೆ ಸಂಬಂಧಿಸಿದಂತೆ 2016ರ ಡಿ.31ರಂದು ನ್ಯಾಯಾಧೀಶರ ಭೇಟಿಗೆ ಬಂದಿದ್ದ ಖಾಂಡ್ಯಾನನ್ನು ಪೊಲೀಸರ ವಶಕ್ಕೆ ಪಡೆದಿದ್ದರು.

ನ್ಯಾಯಾಲಯ ಆಗ ಖಾಂಡ್ಯಾಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ನಂತರ ಸಿಐಡಿ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಖಾಂಡ್ಯಾನನ್ನು ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಸಿಐಡಿ ಅರ್ಜಿ ಪರಿಶೀಲಿಸಿದ ನ್ಯಾಯಾಧೀಶರು ನಿನ್ನೆ ಖಾಂಡ್ಯಾನನ್ನು ಸಿಐಡಿ ವಶಕ್ಕೆ ಒಪ್ಪಿಸಿದ್ದಾರೆ. ಪ್ರವೀಣ್ ಖಾಂಡ್ಯಾ ವೃತ್ತಿಯಲ್ಲಿ ಅರ್ಚಕನಾಗಿದ್ದಾನೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin