ಕಾರಟಗಿಯಲ್ಲಿ ಸಿಲಿಂಡರ್ ಸ್ಫೋಟಕ್ಕೆ 13 ಅಂಗಡಿಗಳು, ಗ್ಯಾರೇಜ್‍ಗಳು ಭಸ್ಮ

ಈ ಸುದ್ದಿಯನ್ನು ಶೇರ್ ಮಾಡಿ

Koppala--02

ಕೊಪ್ಪಳ, ಜ.20- ಸಿಲಿಂಡರ್ ಸ್ಫೋಟಗೊಂಡು ಭಾರೀ ಅವಘಡ ಸಂಭವಿಸಿ ಸುಮಾರು 13 ಅಂಗಡಿಗಳು, ಗ್ಯಾರೇಜ್‍ಗಳು ಸುಟ್ಟು ಭಸ್ಮವಾಗಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಕಾರಟಗಿಯಲ್ಲಿ ಇಂದು ಮುಂಜಾನೆ 4 ಗಂಟೆ ಸಮಯದಲ್ಲಿ ನಡೆದಿದೆ. ಕಾರಟಗಿಯ ರಾಜ್ಯ ಹೆದ್ದಾರಿ ಪಕ್ಕದ ಫುಟ್‍ಪಾತ್ ಅಂಗಡಿಯೊಂದರಲ್ಲಿದ್ದ ಸಿಲಿಂಡರ್ ಬ್ಲಾಸ್ಟ್ ಆಗಿ ಧಗಧಗನೆ ಬೆಂಕಿ ಹೊತ್ತಿ ಉರಿದ ಪರಿಣಾಮ ಬೆಂಕಿಯ ಕೆನ್ನಾಲಿಗೆಗೆ ಅಕ್ಕಪಕ್ಕದ 13 ಹೊಟೇಲ್, ಗ್ಯಾರೇಜ್, ಅಂಗಡಿಗಳು ಸುಟ್ಟು ಕರಕಲಾಗಿದ್ದು, ಅಪಾರ ಪ್ರಮಾಣದ ವಸ್ತುಗಳು ನಾಶವಾಗಿವೆ.

Koppal  01

ಸ್ಥಳಕ್ಕೆ ದಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು 4 ಗಂಟೆಗಳ ಕಾಲ ಹರಸಾಹಸ ಪಟ್ಟು ಅಗ್ನಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಎಲ್ಲರೂ ಅಂಗಡಿ ಬಾಗಿಲುಗಳನ್ನು ಮುಚ್ಚಿ ಮನೆಯಲ್ಲಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದರಿಂದ ಪ್ರಾಣಾಪಾಯ ಸಂಭವಿಸಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಕಾರಟಗಿ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

Koppal  04

Koppal  05

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin