ಕಾವೇರಿ ಉಗಮಸ್ಥಳ ಕೊಡಗು ಜಿಲ್ಲೆಯಲ್ಲಿ ಹಿಂದೆಂದೂ ಕಾಣದಂಥ ಭೀಕರ ಬರದ ಛಾಯೆ

ಈ ಸುದ್ದಿಯನ್ನು ಶೇರ್ ಮಾಡಿ

Kodagauಬೆಂಗಳೂರು ಸೆ,14 – ಕಾವೇರಿ ನದಿ ನೀರಿಗಾಗಿ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವೆ ತೀವ್ರ ಹೋರಾಟ ನಡೆಯುತ್ತಿದ್ದರೆ, ಅತ್ತ ಕಾವೇರಿ ನದಿಯ ಉಗಮಸ್ಥಳ ಕೊಡಗು ಜಿಲ್ಲೆಯಲ್ಲಿ ಹಿಂದೆಂದೂ ಕಾಣದಂಥ ಭೀಕರ ಬರದ ಛಾಯೆ ಆವರಿಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜಿಲ್ಲೆಯ ಎಲ್ಲ ಮೂರೂ ತಾಲೂಕುಗಳಲ್ಲಿ ಅತಿ ಕಡಿಮೆ ಮಳೆ ಉಂಟಾಗಿದ್ದು, ಪರಿಸ್ಥಿತಿ ಹೀಗೆ ಮುಂದುವರಿದರೆ ಶೀಘ್ರ ಇಡೀ ಜಿಲ್ಲೆ ಬರಗಾಲ ಪೀಡಿತ ಜಿಲ್ಲೆಯಾಗಿ ಘೋಷಣೆಯಾಗಲಿದೆ. ಕಳೆದ ಜೂನ್ 1ರಿಂದ ಸೆಪ್ಟೆಂಬರ್ 12ರ ನಡುವೆ ಕೇವಲ 1449.72 ಮಿಲಿ ಮೀಟರ್ ಮಳೆ ಬಿದ್ದಿದೆ. ಆದರೆ ವಾಸ್ತವವಾಗಿ 2219.20 ಮಿಮೀ ಮಳೆ ಬೀಳಬೇಕಾಗಿತ್ತು. ಸದ್ಯದ ಲೆಕ್ಕಾಚಾರದ ಪ್ರಕಾರ, ಜಿಲ್ಲೆಯಲ್ಲಿ ಶೇ.35ರಿಂದ ಶೇ.48ರಷ್ಟುಕಡಿಮೆ ಮಳೆ ದಾಖಲಾಗಿದೆ.
ಜಲಸಂಪನ್ಮೂಲ ಇಲಾಖೆಯ ಪ್ರಕಾರ, ಕಾವೇರಿ ನದಿ ನೀರಿನ ಒಟ್ಟು 790 ಟಿಎಂಸಿ ನೀರಿನಲ್ಲಿ ಕೊಡುಗೆ ಜಿಲ್ಲೆಯಿಂದ 400 ಟಿಎಂಸಿ ನೀರು ಸಂಗ್ರಹವಾಗುತ್ತದೆ.

ಆದಾಗ್ಯೂ ಕಾವೇರಿ ನದಿ ನೀರಿಗಾಗಿ ಎರಡು ರಾಜ್ಯಗಳಲ್ಲಿ ಕದನವೇ ನಡೆದರೂ ನದಿಯ ಉಗಮ ಸ್ಥಳದಲ್ಲಿ ಯಾವುದೇ ರೀತಿಯ ಅಪಸ್ವರ ಕೇಳಿಬಂದಿಲ್ಲ. ಏಕೆಂದರೆ ಕಾವೇರಿ ನದಿಯಿಂದ ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಅಲ್ಪಭಾಗಕ್ಕೆ ಮಾತ್ರ ನೀರಾವರಿ ಸೌಲಭ್ಯವಿದೆ. ಉಳಿದಂತೆ ದೀಪದ ಬುಡದಲ್ಲೇ ಕತ್ತಲು ಎಂಬಂತೆ ಈ ನದಿಯ ನೀರಿನಿಂದ ಜಿಲ್ಲೆಯ ಜನರಿಗೆ ಹೆಚ್ಚು ಲಾಭವಿಲ್ಲ ಎನ್ನುತ್ತಾರೆ ಸ್ಥಳೀಯರು.

► Follow us on –  Facebook / Twitter  / Google+

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin