ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಕೊಟ್ಟರೆ ನಿಭಾಯಿಸುವೆ : ಮನಗೂಳಿ

ಈ ಸುದ್ದಿಯನ್ನು ಶೇರ್ ಮಾಡಿ

Mangoli--01
ವಿಜಯಪುರ, ಜೂ.10-ಜಿಲ್ಲಾ ಉಸ್ತುವಾರಿ ಜವಾಬ್ದಾರಿ ವಹಿಸಿದರೆ ಅದನ್ನು ನಿಭಾಯಿಸುತ್ತೇನೆ ಎಂದು ತೋಟಗಾರಿಕಾ ಸಚಿವ ಎಂ.ಸಿ.ಮನಗೂಳಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಬೇಕು ಅಥವಾ ಬೇಡ ಎಂದೇನಿಲ್ಲ. ಜವಾಬ್ದಾರಿ ನೀಡಿದರೆ ನಿಭಾಯಿಸಲು ಸಿದ್ಧ ಎಂದ ಅವರು, ತೋಟಗಾರಿಕಾ ಇಲಾಖೆಯಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ದ್ರಾಕ್ಷಿ, ದಾಳಿಂಬೆ ಸೇರಿದಂತೆ ಇತರೆ ತೋಟಗಾರಿಕಾ ಬೆಳೆಗಳನ್ನು ಪ್ರೋತ್ಸಾಹಿಸಲಾಗುವುದು. ಜಿಲ್ಲೆಯ ರೈತರ ಅನುಕೂಲಕ್ಕಾಗಿ ಕೋಲ್ಡ್ ಸ್ಟೋರೇಜ್ ನಿರ್ಮಿಸುವ ಚಿಂತನೆ ಇದೆ ಎಂದು ವಿವರಿಸಿದರು. ರೈತರ ಸಾಲದ ಬಡ್ಡಿ ಕಡಿತಗೊಳಿಸುವುದು, ದ್ರಾಕ್ಷಿ ಬೆಳೆಗಾರರಿಗೆ ಬೆಂಬಲ ಬೆಲೆ ಕೊಡುವುದು ಸೇರಿದಂತೆ ಎಲ್ಲ ರೀತಿಯ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಲಿದ್ದೇನೆ ಎಂದು ಹೇಳಿದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin