ಜೆಡಿಎಸ್‍ನ ಎಲ್ಲಾ ಶಾಸಕರು ಒಗ್ಗಟ್ಟಾಗಿದ್ದು ಹೆಚ್ಡಿಕೆ ಜೊತೆಯಲ್ಲಿರುತ್ತೇವೆ : ಶರವಣ

ಈ ಸುದ್ದಿಯನ್ನು ಶೇರ್ ಮಾಡಿ

Sharavana
ಬೆಂಗಳೂರು, ಮೇ 16- ಜೆಡಿಎಸ್‍ನ ಎಲ್ಲಾ ಶಾಸಕರು ಒಗ್ಗಟ್ಟಾಗಿದ್ದು , ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಜತೆಯಲ್ಲೇ ಇದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ತಿಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‍ನಿಂದ ಚುನಾಯಿತರಾಗಿರುವ ಎಲ್ಲರೂ ಕೂಡ ಪಕ್ಷ ನಿಷ್ಠರಾಗಿದ್ದಾರೆ. ಆಪರೇಷನ್ ಕಮಲ ಮಾಡಲು ಪ್ರಯತ್ನ ಪಟ್ಟಿದ್ದರೂ ಸಫಲವಾಗಿಲ್ಲ. ನಮ್ಮ ಪಕ್ಷದ ಯಾರೂ ಕೂಡ ಆಪರೇಷನ್ ಕಮಲಕ್ಕೆ ಒಳಗಾಗುವುದಿಲ್ಲ ಎಂದರು.  ಕಾಂಗ್ರೆಸ್ ಪಕ್ಷದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ ಪಕ್ಷ ಯಾವ ನಿಲುವು ತೆಗೆದುಕೊಳ್ಳಬೇಕೆಂಬ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin