ಟೋಲ್ ಸುಂಕ ಕೇಳಿದ್ದಕ್ಕೆ ಸಿಬ್ಬಂದಿ ಮೇಲೆ ವಾಹನ ಚಲಾಯಿಸಲೆತ್ನಿಸಿದ ಚಾಲಕ

ಈ ಸುದ್ದಿಯನ್ನು ಶೇರ್ ಮಾಡಿ

Car1

ಬೆಂಗಳೂರು, ಜು.28- ಟೋಲ್ ಸುಂಕ ಕೇಳಿದ್ದಕ್ಕೆ ಜೀಪ್ ಚಾಲಕನೊಬ್ಬ ಸಿಬ್ಬಂದಿ ಮೇಲೆ ವಾಹನ ಚಲಾಯಿಸಲು ಯತ್ನಿಸಿರುವ ಘಟನೆ ಬೆಂಗಳೂರು ಹೊರವಲಯ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ನೆಲಮಂಗಲ ಸಮೀಪದ ಪಾರ್ಲೆಜೀ ಕಂಪನಿ ಬಳಿ ಇರುವ ನವಯುಗ ಟೋಲ್ ನಲ್ಲಿ ಹದಿನೈದು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ಸಿಸಿಟಿವಿ ಕ್ಯಾಮೆರಾ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಸಂಚಲನ ಮೂಡಿಸಿವೆ.

ಟೋಲ್ ಸಂಗ್ರಹ ಕೇಂದ್ರದಲ್ಲಿ ಸುಂಕ ಕೇಳಿದ್ದಕ್ಕೆ ಟೋಲ್ ಸಿಬ್ಬಂದಿ ಮೇಲೆ ಚಾಲಕ ಜೀಪ್ ಚಲಾಯಿಸಿದ್ದಾನೆ. ಈ ಎಲ್ಲ ದೃಶ್ಯಗಳು ಟೋಲ್ ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜೀಪ್ ಹರಿಸಿದ ನಂತರವೂ ಟೋಲ್ ಸಿಬ್ಬಂದಿ ಸುಂಕ ಕೇಳಿದ್ದಾರೆ. ಆಗ ಇಬ್ಬರು ಚಾಲಕರು ಟೋಲ್ ಸಿಬ್ಬಂದಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ.

ಈ ಘಟನೆಯ ನಂತರ ನವಯುಗ ಟೋಲ್ ಸಿಬ್ಬಂದಿ ಸ್ಥಳೀಯ ಪೀಣ್ಯ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೆÇಲೀಸರು ಸಿಸಿಟಿವಿ ದೃಶ್ಯಾವಳಿ ವಶಕ್ಕೆ ಪಡೆದು ಪರಿಶೀಲನೆ ನಡೆಸಿ, ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin