ಟ್ರಕ್ ಮತ್ತು ಮಿನಿ ಬಸ್ ನಡುವೆ ಭೀಕರ ಅಪಘಾತ ; 14 ಯಾತ್ರಿಗಳ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

14-Killed

ಅಹಮದಾಬಾದ್, ನ.5 – ಟ್ರಕ್ ಮತ್ತು ಮಿನಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ 14 ಮಂದಿ ಮೃತಪಟ್ಟು, ಇತರೆ ಮೂವರು ತೀವ್ರ ಗಾಯಗೊಂಡಿರುವ ಘಟನೆ ಅಹಮದಾಬಾದ್ ಜಿಲ್ಲೆಯು ವಲ್‍ಥೆರಾ ಪಟಿಯಾ ಗ್ರಾಮದ ಬಳಿ ನಡೆದಿದೆ.  ರಾಜಕೋಟ್ ಜಿಲ್ಲೆಯ ಸೋಖ್ಡಾ ಗ್ರಾಮದಿಂದ 17 ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ನಿನ್ನೆ ರಾತ್ರಿ ವೇಗವಾಗಿ ಬರುತ್ತಿದ್ದ ಟ್ರಕ್‍ಗೆ ಅಪ್ಪಳಿಸಿದ ಪರಿಣಾಮ ಈ ಭೀಕರ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಜರಾತ್ ಪಂಚಮಶಾಲೆಯ ಯಾತ್ರಾ ಸ್ಥಳವಾದ ಪಾವಗಢಕ್ಕೆ ಭೇಟಿ ನೀಡಿ ಯಾತ್ರಿಗಳು ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿತು. ದುರಂತದ ನಂತರ ಟ್ರಕ್ ಚಾಲಕ ನಾಪತ್ತೆಯಾಗಿದ್ದಾನೆ.  ಮೃತರೆಲ್ಲರೂ 17 ರಿಂದ 45ರ ವಯಸ್ಸಿನವರು. ಗಾಯಗೊಂಡವರನ್ನು ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

► Follow us on –  Facebook / Twitter  / Google+

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin