ತೋಳ ದಾಳಿ: 30 ಮಂದಿಗೆ ಗಾಯ, 7ಮಂದಿ ಗಂಭೀರ

ಈ ಸುದ್ದಿಯನ್ನು ಶೇರ್ ಮಾಡಿ

Tola--01

ಗದಗ, ಮೇ 14– ರಾತ್ರಿ ಹೊರಗಡೆ ಮಲಗಿದ್ದವರ ಮೇಲೆ ದಾಳಿ ಮಾಡಿರುವ ತೋಳ ಸುಮಾರು 30ಕ್ಕೂ ಹೆಚ್ಚು ಜನರನ್ನು ಕಚ್ಚಿ ಗಾಯಗೊಳಿಸಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ಗುಜಮಾಗಡಿ ಕುರಡಗಿ ಗ್ರಾಮದಲ್ಲಿ ನಡೆದಿದೆ. 30ಕ್ಕೂ ಹೆಚ್ಚು ಜನರನ್ನು ಕಚ್ಚಿ ಪರಾರಿ ಯಾಗಿದೆ. ಇವರಲ್ಲಿ 7 ಜನರ ಸ್ಥಿತಿ ಗಂಭೀರವಾಗಿದೆ.  ಉಯಿಲುಗೊಳ, ಎರೆಬಿಲೆರಿ ಗ್ರಾಮದಲ್ಲೂ ತೋಳ ದಾಳಿ ಮಾಡಿದೆ. ಗಾಯಗೊಂಡವರನ್ನು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ರಾತ್ರಿ ವೇಳೆ ಇದ್ದಕ್ಕಿದ್ದಂತೆ ತೋಳ ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿರುವ ಘಟನೆಗೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin