ದೇಶದಲ್ಲಿ ಸಂವಿಧಾನದ ಮೇಲೆ ತೀವ್ರ ಆಕ್ರಮಣಗಳು ನಡೆಯುತ್ತಿವೆ : ರಾಹುಲ್ ಆತಂಕ

ಈ ಸುದ್ದಿಯನ್ನು ಶೇರ್ ಮಾಡಿ

Rahul--01
ರಾಯ್‍ಪುರ್, ಮೇ 17- ದೇಶದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸಂವಿಧಾನದ ಮೇಲೆ ತೀವ್ರ ಆಕ್ರಮಣಗಳು ನಡೆಯುತ್ತಿವೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದಲ್ಲಿ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿ ಹರಿಹಾಯ್ಡ ರಾಹುಲ್. ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ಪಾಕಿಸ್ತಾನಕ್ಕೆ ಹೋಲಿಸಿದರು. ಛತ್ತೀಸ್‍ಗಢದ ರಾಜಧಾನಿ ರಾಯ್‍ಪುರ್‍ನಲ್ಲಿ ಜನ ಸಮಾಜ ಸಮ್ಮೇಳನ ಉದ್ದೇಶಸಿ ಮಾತನಾಡಿದ ಅವರು, ಬಿಜೆಪಿ ಮತ್ತು ಆರ್‍ಎಸ್‍ಎಸ್ ದೇಶದಲ್ಲಿನ ಪ್ರತಿಯೊಂದು ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ಹಿಡಿತದಲ್ಲಿಟ್ಟುಕೊಳ್ಳುತ್ತಿದೆ. ನಮ್ಮ ನ್ಯಾಯಾಂಗ ವ್ಯವಸ್ಥೆಯು ಪಾಕಿಸ್ತಾನದ ರೀತಿಯಲ್ಲಿ ಹದಗೆಡುತ್ತಿದೆ. ನ್ಯಾಯಾಂಗ ಸಾರ್ವಜನಿಕ ಅಭಿಪ್ರಾಯವನ್ನು ಕೇಳುವ ಮಟ್ಟಕ್ಕೆ ಪರಿಸ್ಥಿತಿ ತಲುಪಿದೆ ಎಂದು ವಿಷಾದಿಸಿದರು. ಕರ್ನಾಟಕದಲ್ಲಿ ಸಂವಿಧಾನಕ್ಕೆ ವಿರುದ್ಧವಾಗಿ ಬಿಜೆಪಿ ನಡೆದುಕೊಂಡಿದೆ. ಈ ಬೆಳವಣಿಗೆ ಸಂವಿಧಾನವನ್ನು ಅಣಕಿಸುವಂತಿದೆ ಎಂದು ಅವರು ವಿಷಾದಿಸಿದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin