ಧರ್ಮಸ್ಥಳ ಭೇಟಿ ನಂತರ ಬೆಂಗಳೂರಲ್ಲಿ ರಾಜ್ಯ ನಾಯಕರೊಂದಿಗೆ ಮೋದಿ ಎಲೆಕ್ಷನ್ ಪ್ಲಾನ್

ಈ ಸುದ್ದಿಯನ್ನು ಶೇರ್ ಮಾಡಿ

Modi-Yadiyurappa--02

ಬೆಂಗಳೂರು.ಅ.28- ನಾಳೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದು, ಆ ಬಳಿಕ ಬೆಂಗಳೂರಿಗೆ ಆಗಮಿಸಿ ರಾಜ್ಯ ಬಿಜೆಪಿ ನಾಯಕರೊಂದಿಗೆ ಮೋದಿ ಮಾತುಕತೆ ನಡೆಸಲಿದ್ದಾರೆ. ಮುಂಬರುವ ಚುನಾವಣಾ ಸಿದ್ಧತೆಗಳ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಪ್ರಧಾನಿ ಜತೆ ಚರ್ಚೆ ನಡೆಸಲಿದ್ದಾರೆಂದು ಹೇಳಲಾಗಿದೆ. ಆದರೆ ಯಾವಾಗ, ಎಲ್ಲಿ ಎಂದು ಇನ್ನೂ ಸಮಯ, ಸ್ಥಳ ನಿಗದಿಯಾಗಿಲ್ಲ ಎನ್ನಲಾಗಿದೆ. ಪರಿವರ್ತನಾ ರ್ಯಾಲಿ, ಚುನಾವಣಾ ಸಿದ್ಧತೆಗಳ ಬಗ್ಗೆ ಪ್ರಧಾನಿ ಮೋದಿ ಜತೆ ಬಿಜೆಪಿ ನಾಯಕರು ಸಲಹೆ ಪಡೆಯಲಿದ್ದಾರೆ. ನಾಳೆ ರಾಜ್ಯಕ್ಕೆ ಆಗಮಿಸಲಿರುವ ಮೋದಿ ಧರ್ಮಸ್ಥಳ ಭೈೀಟಿ ಬಳಿಕ, ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಸೌಂದರ್ಯ ಲಹರಿ ಪಾರಾಯಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಬೀದರ್ ನಲ್ಲಿ ರೈಲ್ವೇ ಮಾರ್ಗ ಉದ್ಘಾಟಿಸಲಿದ್ದಾರೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin