ನಮ್ಮ ಗ್ರಾಮ ರಸ್ತೆ ಯೋಜನೆಯಯಲ್ಲಿ ಅವ್ಯವಹಾರ ನಡೆದಿಲ್ಲ

ಈ ಸುದ್ದಿಯನ್ನು ಶೇರ್ ಮಾಡಿ

HK-Patil-Session

ಬೆಳಗಾವಿ,ನ.17-ನಮ್ಮ ಗ್ರಾಮ ರಸ್ತೆ ಯೋಜನೆಯಡಿ ನಿರ್ಮಾಣ ಮಾಡಲಾದ ರಸ್ತೆಗಳಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆದಿಲ್ಲ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಸಚಿವ ಎಚ್.ಕೆ.ಪಾಟೀಲ್ ವಿಧಾನ ಪರಿಷತ್‍ನಲ್ಲಿ ಸ್ಪಷ್ಟಪಡಿಸಿದರು. ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಅನುಸರಿಸಿ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆ ಅಳವಡಿಸಿಕೊಂಡಿದ್ದೇವೆ. ಮೂರು ಹಂತದ ಗುಣಮಟ್ಟವುಳ್ಳ ಕಾಮಗಾರಿ ಮಾಡಿರುವುದರಿಂದ ಇದರಲ್ಲಿ ಕಳಪೆ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ತಿಳಿಸಿದರು.

ಈ ಯೋಜನೆಯಡಿ 2010-11ನೇ ಸಾಲಿನಲ್ಲಿ ರಾಜ್ಯ ಸರ್ಕಾರದ ಅನುದಾನದ ವ್ಯಾಪ್ತಿಯಡಿ 17,700 ಕಿ.ಮೀ ರಸ್ತೆ ಕಾಮಗಾರಿಗೆ ಅನುಮೋದನೆ ಸಿಕ್ಕಿದೆ. 2017 ಅಕ್ಟೋಬರ್ ಅಂತ್ಯಕ್ಕೆ 12535 ಕಿಮೀ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಬಾಕಿ ಉಳಿದ ರಸ್ತೆಯನ್ನು ತಾಂತ್ರಿಕ ಕಾರಣದಿಂದಾಗಿ ಕೈಬಿಡಲಾಗಿದೆ ಎಂದು ಹೇಳಿದರು.  ರಸ್ತೆ ಗುಣಮಟ್ಟ ಕಾಪಾಡಿಕೊಳ್ಳುವುದೇ ಸರ್ಕಾರದ ಉದ್ದೇಶವಾಗಿರುವುದರಿಂದ ಕಳಪೆ ಕಾಮಗಾರಿ ಮಾಡುವ ಗುತ್ತಿಗೆದಾರರ ಮೇಲೆ ಕಠಿಣಕಾನೂನು ಕ್ರಮ ಜರುಗಿಸುವುದಾಗಿ ಎಚ್.ಕೆ.ಪಾಟೀಲ್ ಎಚ್ಚರಿಸಿದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin