ನವಕರ್ನಾಟಕ ಮಾಡುವುದೇ ನಮ್ಮ ಗುರಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

KR-Nagara
ಕೆ.ಆರ್.ನಗರ, ಅ.16- ಸರ್ಕಾರ ಮಾಡಿರುವ ಜನಪರ ಕೆಲಸಗಳಿಗೆ ಸಾರ್ವಜನಿಕರು ಮನ್ನಣೆ ನೀಡಲಿದ್ದು, 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಲಿದ್ದು ಮುಂದೆ ನವಕರ್ನಾಟಕ ನಿರ್ಮಾಣ ಮಾಡುವುದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪಟ್ಟಣದ ಪುರಸಭೆ ಬಯಲು ರಂಗಮಂದಿರದ ಆವರಣದಲ್ಲಿ ಆಯೋಜಿಸಿದ್ದ ಬೂತ್ ಮಟ್ಟದ ಪದಾಧಿಕಾರಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿಯಾದ ನಂತರ ರಾಜ್ಯದ 6.5 ಕೋಟಿ ಜನರಿಗೆ ಒಂದಲ್ಲಾ ಒಂದು ರೀತಿಯ ಸವಲತ್ತುಗಳನ್ನು ಸರ್ಕಾರದ ವತಿಯಿಂದ ಕೊಡಮಾಡಿದ್ದು ಚುನಾವಣಾ ಪೂರ್ವದಲ್ಲಿ ಜನತೆಗೆ ನೀಡಿದ್ದ 165 ಭರವಸೆಗಳ ಪೈಕಿ 155 ಭರವಸೆಗಳನ್ನು ಈಡೇರಿಸಿದ್ದೇವೆ ಎಂದರು.

ಡಿ.1 ರಿಂದ ದೇಶದಲ್ಲಿಯೇ ಪ್ರಥಮವಾಗಿ ರಾಜ್ಯದಲ್ಲಿ ಅನಿಲ ಭಾಗ್ಯ ಯೋಜನೆ ಜಾರಿಗೆ ತರಲಿದ್ದು ರಾಜ್ಯದ 15 ಲಕ್ಷ ಬಡ ಕುಟುಂಬಗಳಿಗೆ ಉಚಿತವಾಗಿ ಸಿಲಿಂಡರ್ ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಘೋಷಣೆ ಮಾಡಿದ ಸಿಎಂ, ಬಡವರು ಸೀಮೆಎಣ್ಣೆಯನ್ನು ಬಳಸದೆ ಗ್ಯಾಸ್ ಸಿಲಿಂಡರ್‍ನಲ್ಲಿ ಅಡುಗೆ ಮಾಡಬೇಕು ಎಂಬುದೆ ಸರ್ಕಾರದ ಪ್ರಮುಖ ಉದ್ದೇಶ ಎಂದರು. ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ವಿಷ್ಣುನಾಧನ್, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಸಕ್ಕರೆ ಸಚಿವರಾದ ಗೀತಾ ಮಹದೇವಪ್ರಸಾದ್, ಸಂಸದ ಆರ್,ದ್ರುವನಾರಾಯಣ್, ಶಾಸಕರಾದ ಕೆ.ವೆಂಕಟೇಶ್, ಹೆಚ್.ಪಿ.ಮಂಜುನಾಥ್, ತಾಲೂಕು ಕಾಂಗ್ರೆಸ್ ಮುಖಂಡ ದೊಡ್ಡಸ್ವಾಮೇಗೌಡ ಮಾತನಾಡಿದರು.

ಸೇರ್ಪಡೆ: ಜಿ.ಪಂ. ಮಾಜಿ ಸದಸ್ಯ ಎಂ.ಟಿ.ಕುಮಾರ್, ಪುರಸಭೈ ಮಾಜಿ ಅಧ್ಯಕ್ಷ ಡಿ.ಕಾಂತರಾಜು ಸೇರಿದಂತೆ ನೂರಾರು ಮಂದಿ ವಿವಿಧ ಪಕ್ಷಗಳನ್ನು ತೊರೆದು ಕಾಂಗ್ರೆಸ್‍ಗೆ ಸೇರ್ಪಡೆಯಾದರು. ಶಾಸಕ ಕಳಲೆಕೇಶವಮೂರ್ತಿ, ವಿಧಾನಪರಿಷತ್ ಸದಸ್ಯ ಆರ್.ಧರ್ಮಸೇನಾ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್ ಕೆ.ಸಿ.ಪುಟ್ಟಸಿದ್ದಶೆಟ್ಟಿ, ತಾ.ಪಂ.ಅಧ್ಯಕ್ಷ ಹೆಚ್.ಟಿ.ಮಂಜುನಾಥ್, ತಾಲೂಕು ಕಾಂಗ್ರೆಸ್ ಉಸ್ತುವಾರಿ ಅಶ್ವಿನ್‍ಕುಮಾರ್‍ರೈ, ಪ್ರಧಾನ ಕಾರ್ಯದರ್ಶಿ ಮಳವಳ್ಳಿಶಿವಣ್ಣ, ಜಿ.ಪಂ. ಮಾಜಿ ಅಧ್ಯಕ್ಷ ಕೆ.ಮರೀಗೌಡ, ಸದಸ್ಯರಾದ ಡಿ.ರವಿಶಂಕರ್ ಸೇರಿದಂತೆ ಹಲವಾರು ಮುಖಂಡರು, ಕಾರ್ಯಕರ್ತರು ಉಪಸ್ಥಿತರಿಸಿದ್ದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin