ಪತ್ನಿಯ ನಿಧನದಿಂದ ನೊಂದು ಪತಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

hanging--suicide

ಬೆಂಗಳೂರು, ಜು.15- ಅನಾರೋಗ್ಯದಿಂದ ಬಳಲುತ್ತಿದ್ದ ಪತ್ನಿಯ ಸಾವಿನಿಂದ ನೊಂದ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೃಷ್ಣೋಜಿರಾವ್ (58) ಮತ್ತು ಸಾವಿತ್ರಿಬಾಯಿ (51) ಮೃತಪಟ್ಟವರು. ವಿದ್ಯಾರಣ್ಯಪುರದ ವರ್ಧನ್ ಅಪಾರ್ಟ್‍ಮೆಂಟ್ 2ನೆ ಮಹಡಿಯಲ್ಲಿ ಮಗ-ಸೊಸೆಯೊಂದಿಗೆ ಈ ದಂಪತಿ ವಾಸವಾಗಿದ್ದರು. ಕಳೆದ ಎರಡು-ಮೂರು ವರ್ಷಗಳಿಂದ ಪಾಶ್ರ್ವವಾಯು ಪೀಡಿತರಾಗಿದ್ದ ಸಾವಿತ್ರಿಬಾಯಿ ಹಾಸಿಗೆ ಹಿಡಿದಿದ್ದರು.

ನಿನ್ನೆ ಬೆಳಗ್ಗೆ 11.30ರಲ್ಲಿ ಮಗ-ಸೊಸೆ ಹೊರಗೆ ಹೋಗಿದ್ದಾಗ ಅನಾರೋಗ್ಯದಿಂದ ಬಳಲುತ್ತಿದ್ದ ಸಾವಿತ್ರಿಬಾಯಿ ಸಾವನ್ನಪ್ಪಿದ್ದಾರೆ. ಇದನ್ನು ಕಂಡ ಪತಿ ಕೃಷ್ಣೋಜಿರಾವ್ ಬೇಸರಗೊಂಡು ಆ ಕೊಠಡಿಯಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜೆ 4.30ಕ್ಕೆ ಮಗ-ಸೊಸೆ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಸುದ್ದಿ ತಿಳಿದ ವಿದ್ಯಾರಣ್ಯಪುರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಶವವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ನಂತರ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಈ ಸಂಬಂಧ ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin