ಪರಮೇಶ್ವರ್ ಗ್ರಾಮ ವಾಸ್ತವ್ಯ : ಮುದ್ದೆ ತಿಂದು ಚಾಪೆ ಮೇಲೆ ಮಲಗಿದ ಕೆಪಿಸಿಸಿ ಅಧ್ಯಕ್ಷ..!

ಈ ಸುದ್ದಿಯನ್ನು ಶೇರ್ ಮಾಡಿ

Parameshwar--02
ತುಮಕೂರು, ಜ.30-ಶತಾಯಗತಾಯ ಈ ಬಾರಿ ಕೊರಟಗೆರೆ ಕ್ಷೇತ್ರವನ್ನು ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಮೂರನೇ ಬಾರಿಗೆ ಗ್ರಾಮ ವಾಸ್ತವ್ಯ ಹೂಡಿದ್ದಾರೆ. ಮತ ಬೇಟೆಗಾಗಿ ಪರಮೇಶ್ವರ್ ಅವರು, ಕಸರತ್ತು ಮುಂದುವರೆದಿದ್ದು, ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿಯ ಎನ್.ಬೇವಿನಹಳ್ಳಿ ಗ್ರಾಮದ ರೈತ ರಂಗಧಾಮಯ್ಯ ಅವರ ಮನೆಯಲ್ಲಿ ವಾಸ್ತವ್ಯ ಹೂಡಿದ ಅಧ್ಯಕ್ಷರು, ರಾತ್ರಿ ಮುದ್ದೆ ಊಟ ಸೇವಿಸಿ, ಚಾಪೆಯ ಮೇಲೆ ಮಲಗಿದ್ದರು. ಇದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ರಾಮ ವಾಸ್ತವ್ಯ ಪರಿಕಲ್ಪನೆ ಸಮಾಜಮುಖಿಯಾಗಿದೆ. ಇದರಿಂದ ಗ್ರಾಮೀಣ ಜನರ ಸಮಸ್ಯೆಗಳು ಅರಿತುಕೊಳ್ಳಬಹುದು. ಹಾಗಾಗಿ ಮುಂದಿನ ದಿನಗಳಲ್ಲಿ ಎಲ್ಲಾ ಶಾಸಕರಿಗೂ ಗ್ರಾಮ ವಾಸ್ತವ್ಯ ಹೂಡುವಂತೆ ಫರ್ಮಾನು ಹೊರಡಿಸಲಾಗುವುದು ಎಂದರು.

Parameshwar--01

ಬಿಜೆಪಿ ಓವೈಸಿ ಜೊತೆ ಸಂಪರ್ಕ ಇರುವುದನ್ನು ಪ್ರಸ್ತಾಪಿಸಿದ ಅವರು, ಬಿಜೆಪಿ ಒಳಗಿದೊಳಗೇ ಓವೈಸಿ ಜೊತೆ ಹೊಂದಾಣಿಕೆ ಮಾಡಿಕೊಂಡಿರುವುದು ನಮಗೇ ಮೊದಲೇ ತಿಳಿದಿತ್ತು. ಅಲ್ಪಸಂಖ್ಯಾತರನ್ನು ದ್ವೇಷಿಸುವ ಬಿಜೆಪಿ ಓವೈಸಿ ಸಖ್ಯ ಬೆಳೆಸಿದೆ. ಅವರಿಗೆ ನೈತಿಕತೆಯೇ ಇಲ್ಲ ಎಂದು ಹೇಳಿದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin