ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು, ಸಮಬಂಧಿಕರ ಆಕ್ರೋಶ

ಈ ಸುದ್ದಿಯನ್ನು ಶೇರ್ ಮಾಡಿ

ಮಂಡ್ಯ, ಜು.13- ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಮೃತಪಟ್ಟಿರುವ ಘಟನೆ ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮದ್ದೂರು ತಾಲೂಕು ಬೆಳ್ಳೂರು ಗ್ರಾಮದ ಮೂರ್ತಿ (46) ಮೃತಪಟ್ಟ ವ್ಯಕ್ತಿ.  ಬೈಕ್ ಕಳ್ಳತನದ ಆರೋಪದ ಮೇಲೆ ನಾಲ್ಕು ದಿನಗಳ ಹಿಂದೆ ಪಶ್ಚಿಮ ಠಾಣೆ ಪೊಲೀಸರು ಈತನನ್ನು ವಿಚಾರಣೆಗಾಗಿ ಠಾಣೆಗೆ ಕರೆತಂದಿದ್ದರು.

ತಡರಾತ್ರಿ ಈತ ಅನುಮಾನಾಸ್ಪದವಾಗಿ ಠಾಣೆಯಲ್ಲಿ ಮೃತಪಟ್ಟಿದ್ದಾರೆ. ಸುದ್ದಿ ತಿಳಿದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದರು. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.   ಸಂಬಂಧಿಗಳ ಆಕ್ರೋಶ: ಸಣ್ಣಪುಟ್ಟ ಕೂಲಿ ಕೆಲಸ ಮಾಡಿಕೊಂಡು ಕುಟುಂಬ ನಡೆಸುತ್ತಿದ್ದ ಮೂರ್ತಿಯನ್ನು ವಿನಾಕಾರಣ ಬೈಕ್ ಕಳ್ಳತನದ ಆರೋಪ ಹೊರಿಸಿ ಠಾಣೆಗೆ ಕರೆದೊಯ್ದಿದ್ದರು. ಇದೀಗ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ ಎಂದು ಸಂಬಂಧಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin