ಬೀಳಗಿ ಬಳಿ ಕೆಎಸ್‍ಆರ್‍ಟಿಸಿ ಬಸ್-ಕ್ರೂಸರ್ ನಡುವೆ ಭೀಕರ ಅಪಘಾತ : 6 ಮಂದಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Bilagi--01

ಬಾಗಲಕೋಟೆ, ಸೆ.8-ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟು ಕೆಲವರು ತೀವ್ರ ಗಾಯಗೊಂಡಿದ್ದಾರೆ.  ಬಸ್ ಮತ್ತು ಕ್ರೂಸರ್ ನಡುವೆ ಈ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಬೀಳಗಿ ತಾಲ್ಲೂಕು ಆಸ್ಪತ್ರೆಗೆ ಸೇರಿಸಲಾಗಿದೆ. ವಿಜಯಪುರದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ ಹಾಗೂ ಮಹಾರಾಷ್ಟ್ರಕ್ಕೆ ಸೇರಿದ ಕ್ರೂಸರ್ ವಾಹನದ ಮಧ್ಯೆ ಈ ಭೀಕರ ಅಪಘಾತ ಸಂಭವಿಸಿದೆ.

Bilagi--023

ಡಿಕ್ಕಿಯ ರಭಸಕ್ಕೆ ಕ್ರೂಸರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಆರು ಮಂದಿ ಮೃತಪಟ್ಟರು. ಅಪಥಾತ ಸ್ಥಳಕ್ಕೆ ಬೀಳಗಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಪಘಾತ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Bilagi--024

Bilagi--02

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin