ಬೇಲೂರಿನಲ್ಲಿ ಚಕಣಾಚಾರಿ ಶಿಲ್ಪಕಲಾ ವಿವಿ ಸ್ಥಾಪನೆ : ಸಚಿವ ಮಂಜು

ಈ ಸುದ್ದಿಯನ್ನು ಶೇರ್ ಮಾಡಿ

beluru-manju
ಬೇಲೂರು, ಏ.9- ಹೊಯ್ಸಳರ ಬೇಲೂರು ಚನ್ನಕೇಶವ ದೇವಾಲಯ ನಿರ್ಮಿಸಿ 900 ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಅಂಗವಾಗಿ ಬೇಲೂರಿನಲ್ಲಿ ಶಿಲ್ಪಕಲಾ ವಿಶ್ವವಿದ್ಯಾಲಯ ಸ್ಥಾಪಿಸಲು ಚಿಂತಿಸಲಾಗಿದೆ ಎಂದು ಪಶು ಸಂಗೋಪನಾ ಹಾಗೂ ರೇಷ್ಮೆ ಸಚಿವ ಎ.ಮಂಜು ಹೇಳಿದರು.
ಚನ್ನಕೇಶವ ಸ್ವಾಮಿ ರಥೋತ್ಸವಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯದ್ಭುತ ಸೂಕ್ಷ್ಮ ಶಿಲ್ಪಕಲೆಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ಮಾತ್ರ ಕಾಣಲು ಸಾಧ್ಯವಾಗಿದ್ದು, ಇಲ್ಲಿಗೆ ದೇಶ-ವಿದೇಶಗಳಿಂದ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ.

ಇಂತಹ ಕಲಾ ಸಂಸ್ಕೃತಿ  ಹೊಂದಿರುವ ಈ ದೇವಾಲಯ ನಿರ್ಮಿಸಿ 900 ವರ್ಷಗಳು ಕಳೆದಿರುವ ಸಂದರ್ಭದಲ್ಲಿ ಸರ್ಕಾರದಿಂದ ಸಂಭ್ರಮಾಚರಣೆ ನಡೆಸಲಾಗುವುದು ಎಂದರು.ಸದ್ಯದಲ್ಲೆ ಪೂರ್ವಭಾವಿ ಸಭೆ ಕರೆದು ಸಲಹೆ ಪಡೆಯಲಾಗುವುದು ಹಾಗೂ ಸರ್ಕಾರದಿಂದ ಈ ಕಾರ್ಯಕ್ರಮಕ್ಕೆ ಅಗತ್ಯವಾದ ಹಣ ನೀಡಲಾಗುವುದು ಎಂದ ಅವರು, ಪ್ರಧಾನ ಮಂತ್ರಿ, ಮಾಜಿ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಗಳನ್ನು ಕರೆಸುವುದಕ್ಕೆ ಪ್ರಯತ್ನಿಸಲಾಗುವುದು. 900ರ ಸಂಭ್ರಮಾಚರಣೆ ಹಾಗೂ ಹೊಯ್ಸಳ ಉತ್ಸವ ನಡೆಸಲು ಮುಂದಾಗಲಿದ್ದೇವೆ.

ಬೇಲೂರಿನಲ್ಲಿ ಶಿಲ್ಪಕಲಾ ವಿಶ್ವ ವಿದ್ಯಾಲಯ ಸ್ಥಾಪಿಸಿ, ಜಕಣಾಚಾರಿ ಕಾಲೇಜೆಂದು ಹೆಸರಿಡುವುದಕ್ಕೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.ಚನ್ನಕೇಶವ ಸ್ವಾಮಿ ದೇವಾಲಯಕ್ಕೆ ಬರುವ ಭಕ್ತರ ಅನುಕೂಲಕ್ಕೆ ಯಾಂತ್ರಿ ನಿವಾಸ ಮತ್ತು ಹೈಟೆಕ್ ಶೌಚಾಲಯ, ಶುದ್ಧ ಕುಡಿಯುವ ನೀರು ಇನ್ನಿತರೆ ಮೂಲ ಸೌಲಭ್ಯಗಳಿಗೆ ಅನುದಾನ ನೀಡುವ ಭರವಸೆ ನೀಡಿದರು.ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಆರ್. ವೆಂಕಟೇಶ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಾಮೋಧರ್, ಜಿಪಂ ಸದಸ್ಯ ತೌಫಿಕ್, ಸಮಿತಿ ಸದಸ್ಯರಾದ ರವೀಶ್, ರಂಗನಾಥ್, ನಿಶಾಂತ್, ಜಮಾಲ್ ಇನ್ನಿತರರಿದ್ದರು.

 

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin