ಮಂಗಳೂರು : ಅಪಘಾತದಲ್ಲಿ ಗಾಯಗೊಂಡಿದ್ದ ತಾಯಿ-ಮಗು ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Mangalore--01
ಮಂಗಳೂರು, ಜ.20- ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿದ್ದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಾಯಿ, ಆರು ತಿಂಗಳ ಹಸುಗೂಸು ಇಂದು ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ತಾಲೂಕಿನ ಆಶೀರ್ವಾದ್ ಸಭಾಂಗಣದ ಎದುರಿಗೆ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿದ್ದ ಘಟನೆಯಲ್ಲಿ ತಾಯಿ ಅರ್ಚನಾ (30) ಆರು ತಿಂಗಳ ಮಗು ಆಶಿ ಮತ್ತು ವೈಷ್ಣವಿ (14) ಗಂಭೀರವಾಗಿ ಗಾಯಗೊಂಡಿದ್ದರು.
ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ತಾಯಿ ಅರ್ಚನಾ ಹಾಗೂ ಮಗು ಆಶಿ ಸಾವನ್ನಪ್ಪಿದ್ದಾರೆ. ಮೂಲತಃ ಮಂಗಳೂರಿನ ಬಜಾಲು ಸಮೀಪದ ನೆಲ್ಲಿಗುಡ್ಡೆ ಗ್ರಾಮದ ನಿವಾಸಿಗಳಾಗಿದ್ದು, ಕಳೆದ ಕೆಲವು ವರ್ಷಗಳಿಂದ ಮಂಗಳೂರಿನ ಕಾವೂರಿನಲ್ಲಿರುವ ಫ್ಲಾಟ್‍ವೊಂದರಲ್ಲಿ ವಾಸವಾಗಿದ್ದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin