ಮರಕ್ಕೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Car-Accident
ದಾವಣಗೆರೆ, ಏ.2- ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿ, ಓರ್ವ ಗಾಯಗೊಂಡಿರುವ ಘಟನೆ ರಾಜ್ಯ ಹೆದ್ದಾರಿ ದೇವಿಕೆರೆ ಬಳಿ ಇಂದು ಬೆಳಗ್ಗೆ ನಡೆದಿದೆ. ಜಗಳೂರು ನಿವಾಸಿಗಳಾದ ಮಹಮ್ಮದ್ ರಫೀಕ್ (37), ಹಫೀಜ್ (56), ನಾಜ್‍ಫೀರ್ (65) ಮೃತಪಟ್ಟ ದುರ್ದೈವಿಗಳು. ಇಂದು ಬೆಳಗ್ಗೆ ಹುಬ್ಬಳ್ಳಿಯಿಂದ ಜಗಳೂರಿಗೆ ಓಮ್ನಿ ಕಾರಿನಲ್ಲಿ ಬರುತ್ತಿರುವಾಗ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಗಂಭೀರ ಗಾಯಗೊಂಡಿದ್ದು, ಆತನನ್ನು ಜಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin