ಮಹಾಮಸ್ತಕಾಭಿಷೇಕ ಉದ್ಘಾಟನೆಗೆ ಆಗಮಿಸಿದ ರಾಷ್ಟ್ರಪತಿಗೆ ಅದ್ದೂರಿ ಸ್ವಾಗತ

ಈ ಸುದ್ದಿಯನ್ನು ಶೇರ್ ಮಾಡಿ

Ramnath-Kovind--01ಬೆಂಗಳೂರು. ಫೆ, 6: ಶ್ರವಣಬೆಳಗೊಳ ಮಹಾಮಸ್ತಕಾಭಿಷೇಕದ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಂದು ಬೆಂಗಳೂರಿನ ಹೆಚ್ಎಎಲ್ ಆಗಮಿಸಿದ ರಾಷ್ಟ್ರಪತಿ ರಾಮ್ ನಾಥ್ ಕೋವಿನ್ದ ಅವರನ್ನು ರಾಜ್ಯಪಾಲರಾದ ವಾಜುಬಾಯಿ ವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು ರಾಷ್ಟ್ರಪತಿ ಅವರನ್ನು ಸ್ವಾಗತಿಸಿದರು. ರಾಷ್ಟ್ರಪತಿಯವರಿಗೆ ಶಾಲು ಹೊದಿಸಿ, ಮೈಸೂರು ಪೇಟ ತೊಡಿಸಿ ಹೂಗುಚ್ಛ ನೀಡುವ ಮೂಲಕ ಅದ್ದೂರಿಯಾಗಿ ಸ್ವಾಗತಿಸಿಕೊಂಡರು.

ರಾಷ್ಟ್ರಪತಿಯ ರಾಮ್‍ನಾಥ್ ಕೋವಿಂದ್ ಅವರು ನಾಳೆ ಬೆಳಗ್ಗೆ 10.20ಕ್ಕೆ ಶ್ರವಣಬೆಳಗೊಳಕ್ಕೆ ಆಗಮಿಸಲಿದ್ದು. ಬೆಳಗ್ಗೆ 10.45ಕ್ಕೆ ಶ್ರವಣಬೆಳಗೊಳದಲ್ಲಿ ಜರುಗುವ ಮಹಾ ಮಸ್ತಕಾಭಿಷೇಕ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin