ಮಾಜಿ ಸಂಸದ ಹೆಚ್. ವಿಶ್ವನಾಥ್ ಅವರ ಪುತ್ರನ ಸರ ಅಪಹರಣ

ಈ ಸುದ್ದಿಯನ್ನು ಶೇರ್ ಮಾಡಿ

Vishwanth

ಮೈಸೂರು, ಮಾ.15-ಮಾಜಿ ಸಂಸದ ಹೆಚ್. ವಿಶ್ವನಾಥ್ ಪುತ್ರನಿಂದ ಕಳ್ಳರು ಚಿನ್ನದ ಸರ ಕಸಿದು ಪರಾರಿಯಾಗಿರುವ ಘಟನೆ ಸರಸ್ವತಿಪುರಂ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೂರ್ವಜ್ ವಿಶ್ವನಾಥ್ ಸರ ಕಳೆದುಕೊಂಡವರು. ಇವರು ನಗರದ ಸರಸ್ವತಿಪುರಂನಲ್ಲಿರುವ ತಮ್ಮ ಮನೆ ಬಳಿ ಕಾರು ನಿಲ್ಲಿಸುವಾಗ ದುಷ್ಕರ್ಮಿಗಳು ಅವರು ಧರಿಸಿದ್ದ 140 ಗ್ರಾಂ ತೂಕದ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ. ಈ ಸಂಬಂಧ ಪೂರ್ವಜ್ ಸರಸ್ವತಿಪುರಂ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin