ಮಾಜಿ ಸಚಿವ ಎಂ.ವೈ. ಘೋರ್ಪಡೆ ಅವರ ಪುತ್ರ ಕಾರ್ತಿಕ್ ಬಿಜೆಪಿಗೆ

ಈ ಸುದ್ದಿಯನ್ನು ಶೇರ್ ಮಾಡಿ

karthik--01

ಬಳ್ಳಾರಿ, ಜ.6- ಕಾರ್ತಿಕ್ ಘೋರ್ಪಡೆ ಅವರು ಸದ್ಯದಲ್ಲೇ ಬಿಜೆಪಿ ಪಕ್ಷವನ್ನು ಸೇರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ..ಎಸ್.ಯಡಿಯೂರಪ್ಪ ಹೇಳಿದ್ದಾರೆ. ಜಿಲ್ಲೆಯ ಸಮಡೂರಿನಲ್ಲಿ ನಡೆದ ಪರಿವರ್ತನಾ ಯಾತ್ರೆಯಲ್ಲಿ ಈ ವಿಷಯ ಸ್ಪಷ್ಟ ಪಡಿಸಿದ ಅವರು ಕಾರ್ತಿಕ್ ಅವರೊಂದಿಗೆ ಪಕ್ಷ ಸೇರ್ಪಡೆ ಸಂಬಂಧ ಈಗಾಗಲೇ ದೂರವಾಣಿ ಮೂಲಕ ಚರ್ಚಿಸಲಾಗಿದ್ದು, ಶೀಘ್ರವೇ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಕಾರ್ತಿಕ್ ಘೋರ್ಪಡೆ ಮಾಜಿ ಸಚಿವ ಎಂ.ವೈ. ಘೋರ್ಪಡೆ ಅವರ ಪುತ್ರನಾಗಿದ್ದು ಅವರು ಈಗ ಬಿಜೆಪಿ ಪಕ್ಷ ಸೇರುತ್ತಿರುವ ಬಗ್ಗೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿದೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin