ಮುಖ್ಯ ಶಿಕ್ಷಕನ ಕೊಲೆ ಪ್ರಕರಣ, ಅಮ್ಮ- ಮಗಳು ಸೇರಿ ಕೊಟ್ಟಿದ್ದರು ಸುಪಾರಿ..!

ಈ ಸುದ್ದಿಯನ್ನು ಶೇರ್ ಮಾಡಿ

Maddur-Murder--01

ಮದ್ದೂರು, ಏ.3- ತಾಲೂಕಿನ ಕೆಎಂ ದೊಡ್ಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮುಖ್ಯ ಶಿಕ್ಷಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 48 ಗಂಟೆಗಳಲ್ಲೇ ಪ್ರಕರಣ ಭೇದಿಸಿರುವ ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಾಂತಮ್ಮ, ನವ್ಯಶ್ರೀ ಬಂಧಿತರು.

ಘಟನೆ ಹಿನ್ನೆಲೆ:

ಮದ್ದೂರು ತಾಲೂಕಿನ ಬಿದರಹೊಸಹಳ್ಳಿ ಶಾಲೆಯಲ್ಲಿ ಮುಖ್ಯ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಶಶಿಭೂಷಣ್ ಕೊಲೆಯಾದ ವ್ಯಕ್ತಿ. ಈತನ ಪತ್ನಿಯೂ ಕೂಡ ಶಿಕ್ಷಕಿಯಾಗಿದ್ದು, ಕೋಡಿಯಾಲ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇವರಿಗೆ ಒಬ್ಬಳು ಮಗಳಿದ್ದು, ಇವರ ಸಾಂಸಾರಿಕ ಜೀವನದಲ್ಲಿ ಆಗಿಂದಾಗ್ಗೆ ಜಗಳ ನಡೆಯುತ್ತಿದ್ದವು ಎನ್ನಲಾಗಿದೆ.  ಒಬ್ಬರನ್ನು ಕಂಡರೆ ಒಬ್ಬರಿಗೆ ಆಗುತ್ತಿರಲಿಲ್ಲ. ಪ್ರತಿನಿತ್ಯ ಶಶಿಭೂಷಣ್ ಜತೆ ತಾಯಿ-ಮಗಳು ಜಗಳವಾಡುತ್ತಿದ್ದರು ಎನ್ನಲಾಗಿದೆ. ಇದರಿಂದ ರೋಸಿಹೋದ ತಾಯಿ-ಮಗಳು ಸಂಚು ರೂಪಿಸಿ ಸುಪಾರಿ ಕೊಟ್ಟು ಕೊಲೆ ಮಾಡಿಸಿದರೆ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಎಂದು ಕೆಟ್ಟದಾಗಿ ಆಲೋಚಿಸಿ ದುಷ್ಕರ್ಮಿಗಳಿಗೆ ಸುಪಾರಿ ಕೊಟ್ಟಿರುತ್ತಾರೆ.

ಕಳೆದ ಮಾ.31ರಂದು ಶಶಿಭೂಷಣ್ ಶಾಲೆಗೆ ತೆರಳುತ್ತಿದ್ದಾಗ ದುಷ್ಕರ್ಮಿಗಳು ಅಡ್ಡ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.  ಈ ಸಂಬಂಧ ಪ್ರಕರಣವನ್ನು ಕೆಎಂ ದೊಡ್ಡಿ ಠಾಣೆ ಪೊಲೀಸರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.   ಮೊಬೈಲ್ ಸಂದೇಶ ಮತ್ತು ಕರೆಗಳನ್ನು ಪರಿಶೀಲಿಸಿದ ಪೊಲೀಸರು ಕೊಲೆ ಮಾಡಿದ ದುಷ್ಕರ್ಮಿಗಳು ಮತ್ತು ತಾಯಿ-ಮಗಳು ಮೊಬೈಲ್‍ನಲ್ಲಿ ಮಾತುಕತೆ ನಡೆದಿರುವುದು ತಿಳಿದುಬರುತ್ತದೆ.  ಈ ಹಿನ್ನೆಲೆಯಲ್ಲಿ ತಾಯಿ-ಮಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಶಿಕ್ಷಕನ ಕೊಲೆಗೆ ಸುಪಾರಿ ನೀಡಿರುವುದು ಬೆಳಕಿಗೆ ಬಂದಿದೆ.

ಈ ಸಂಬಂಧ ಪೊಲೀಸರು ಆರೋಪಿಗಳನ್ನು ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಧೀಶರು ಈ ಇಬ್ಬರನ್ನೂ ಏ.15ರ ವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.  ಎಸ್‍ಪಿ ಸುಧೀರ್‍ಕುಮಾರ್ ರೆಡ್ಡಿ ಮಾರ್ಗದರ್ಶನದಲ್ಲಿ ಡಿವೈಎಸ್‍ಪಿ ಮ್ಯಾಥ್ಯೂ ಥಾಮಸ್ ಹಾಗೂ ಕೆಎಂ ದೊಡ್ಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಈ ಕೊಲೆ ಪ್ರಕರಣ ಭೇದಿಸಿದ್ದಾರೆ.   ಕೊಲೆ ಮಾಡಿದ ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin