ಮುರುಘಾ ಮಠದಲ್ಲಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ

ಈ ಸುದ್ದಿಯನ್ನು ಶೇರ್ ಮಾಡಿ

Anna-Hazare--01

ಚಿತ್ರದುರ್ಗ, ಜ.30- ನಮ್ಮ ಸಂವಿಧಾನ ಅತ್ಯುತ್ತಮವಾಗಿದ್ದು , ಎಲ್ಲರಿಗೂ ಸಮಾನವಾಗಿ ಬದುಕುವ ಹಕ್ಕು ನೀಡಿದೆ. ಅದನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅಭಿಪ್ರಾಯಪಟ್ಟಿದ್ದಾರೆ. ದೇಶದಲ್ಲಿ ಹಲವೆಡೆ ಸಂವಿಧಾನ ಬದಲಾವಣೆಗೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆಗಳು ಬರುತ್ತಿರುವುದರಿಂದ ಅಣ್ಣಾ ಹಜಾರೆ ಅವರ ಮಾತು ಮಹತ್ವ ಪಡೆದುಕೊಂಡಿದೆ.

ಕಳೆದ ರಾತ್ರಿ ಇಲ್ಲಿನ ಪ್ರಸಿದ್ಧ ಮುರುಘಾ ಮಠಕ್ಕೆ ದಿಢೀರನೆ ಭೇಟಿ ನೀಡಿ ಶ್ರೀ ಮುರುಘ ರಾಜೇಂದ್ರ ಶರಣರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ದೇಶದಲ್ಲಿ ಅನ್ನದಾತರ ಆತ್ಮಹತ್ಯೆಗಳು ನಡೆಯುತ್ತಲೇ ಇದ್ದರೂ ಸರ್ಕಾರಗಳು ತಡೆಯುವಲ್ಲಿ ವಿಫಲವಾಗಿವೆ. ಕೃಷಿ ಬಿಕ್ಕಟ್ಟು ಉದ್ಭವವಾಗಿದ್ದು , ಇದರ ಪರಿಹಾರಕ್ಕಾಗಿ ಮಾ.23ರಂದು ದೆಹಲಿಯ ರಾಮ್‍ಲೀಲಾ ಮೈದಾನದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.  ವರ್ಷದಲ್ಲಿ ಸಾವಿರಾರು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. 60 ವರ್ಷ ತುಂಬಿದ ರೈತರಿಗೆ ಪಿಂಚಣಿ ಸಿಗಬೇಕು. ಬೆಳೆದ ಬೆಳೆಗೆ ಸೂಕ್ತ ಬೆಂಬಲ ಬೆಲೆ ದೊರೆಯಬೇಕು ಸೇರಿದಂತೆ ಮತ್ತಿತರ ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸಲಾಗುವುದು ಎಂದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin