ಯುವಕನೊಬ್ಬನನ್ನು ಕೊಲೆ ಮಾಡಿ ಕೆರೆಗೆ ಬಿಸಾಡಿದ ದುಷ್ಕರ್ಮಿಗಳು

ಈ ಸುದ್ದಿಯನ್ನು ಶೇರ್ ಮಾಡಿ

Yadagiri--01

ಯಾದಗಿರಿ,ಡಿ.6-ಯುವಕನೊಬ್ಬನನ್ನು ದುಷ್ಕರ್ಮಿಗಳು ಕೊಲೆ ಮಾಡಿ ಕೆರೆಯಲ್ಲಿ ಬಿಸಾಡಿ ಹೋಗಿರುವ ಘಟನೆ ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ರಾಯಚೂರು ಜಿಲ್ಲೆಯ ಲಿಂಗಸಗೂರು ನಿವಾಸಿ ಕುಮಾರ(22) ಕೊಲೆಯಾದ ಯುವಕ. ಕಳೆದ ಎರಡು ದಿನಗಳ ಹಿಂದೆ ಕುಮಾರನನ್ನು ದುಷ್ಕರ್ಮಿಗಳು ಕೊಲೆ ಮಾಡಿ ನಂತರ ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದು ಪರಾರಿಯಾಗಿದ್ದಾರೆ. ಇಂದು ಬೆಳಗ್ಗೆ ಶವ ಪತ್ತೆಯಾಗಿದ್ದು , ಶವನ್ನು ಪೊಲಿಸರು ಹೊರ ತೆಗೆದಿದ್ದಾರೆ. ಹುಡುಗಿ ವಿಚಾರಕ್ಕೆ ಗಲಾಟೆ ನಡೆದು ಕೊಲೆ ಮಾಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಶಹಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin