ರಾಜ್ಯಪಾಲರು ಬಿಜೆಪಿಗೆ ಆಹ್ವಾನ ನೀಡಿದರೆ , ಸುಪ್ರೀಂ ಮೆಟ್ಟಿಲೇರಲು ಕಾಂಗ್ರೆಸ್ ಸಿದ್ಧತೆ

ಈ ಸುದ್ದಿಯನ್ನು ಶೇರ್ ಮಾಡಿ

Vajubhai-Vala-01

ನವದೆಹಲಿ/ಬೆಂಗಳೂರು,ಮೇ16- ಕರ್ನಾಟಕ ರಾಜ್ಯ ಚುನಾವಣಾ ಫಲಿತಾಂಶ ಅತಂತ್ರವಾಗಿ ಸರ್ಕಾರ ರಚನೆಗೆ ಕಸರತ್ತು ಮುಂದುವರೆದಿರುವಾಗಲೇ ಕಾನೂನು ಅಸ್ತ್ರ ಬಳಸುವ ಸಾಧ್ಯ-ಸಾಧ್ಯತೆ ಬಗ್ಗೆಯೂ ಲೆಕ್ಕಾಚಾರಗಳು ನಡೆಯುತ್ತಿವೆ. ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಗೆ ಸಂಖ್ಯಾಬಲ ಇಲ್ಲದಿದ್ದರೂ ಸರ್ಕಾರ ರಚನೆಗೆ ರಾಜ್ಯಪಾಲ ವಿ.ಆರ್.ವಾಲಾ ಆಹ್ವಾನ ನೀಡಿದ್ದೇ ಆದರೆ ಸುಪ್ರೀಂಕೋರ್ಟ್ ಮೊರೆ ಹೋಗಲು ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ನಂತರ ಬಿ.ಎಸ್.ಯಡಿಯೂರಪ್ಪ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆ ಹಕ್ಕು ಮಂಡಿಸಿದ ಬೆನ್ನಲ್ಲೇ ಕಾನೂನು ತಜ್ಞರನ್ನು ಸಂಪರ್ಕಿಸಿರುವ ಕಾಂಗ್ರೆಸ್ ವರಿಷ್ಠರು ಈ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಒಂದು ವೇಳೆ ಬಿಜೆಪಿಯನ್ನು ಸರ್ಕಾರ ರಚಿಸಲು ಗೌರ್ನರ್ ಆಮಂತ್ರಿಸಿದರೆ ಎಂಟು ಸಂಖ್ಯಾ ಬಲದ ಕೊರತೆ ಹೊಂದಿರುವ ಬಿಜೆಪಿ ವಿರುದ್ಧ ಮತ್ತು ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಲು ಕಾಂಗ್ರೆಸ್ ಸಜ್ಜಾಗುತ್ತಿದೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin