ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಆತ್ಮೀಯ ಬೀಳ್ಕೊಡುಗೆ

ಈ ಸುದ್ದಿಯನ್ನು ಶೇರ್ ಮಾಡಿ

Pranab-Mukharjee--01

ಬೆಂಗಳೂರು, ಜೂ.18- ನಮ್ಮ ಮೆಟ್ರೋ ರೈಲು ಉದ್ಘಾಟನೆಗಾಗಿ ನಗರಕ್ಕೆ ಆಗಮಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಇಂದು ಬೆಳಗ್ಗೆ ಎಚ್‍ಎಎಲ್ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ಎಚ್‍ಎಎಲ್ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲರಾದ ವಿ.ಆರ್.ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರದ ಮುಖ್ಯಕಾರ್ಯದರ್ಶಿ ಸುಭಾಷ್ ಚಂದ್ರ ಖುಂಟಿಆ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಆರ್.ಕೆ.ದತ್ತ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರವೀಣ್‍ಸೂದ್ ಅವರು ರಾಷ್ಟ್ರಪತಿಗಳನ್ನು ಬೀಳ್ಕೊಟ್ಟ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಿನ್ನೆ ಸಂಜೆ ವಿಧಾನಸೌಧದ ಆವರಣದಲ್ಲಿ ಸಂಪಿಗೆ ರಸ್ತೆಯಿಂದ ಯಲಚೇನಹಳ್ಳಿವರೆಗಿನ ಹಸಿರು ಮೆಟ್ರೋ ರೈಲಿಗೆ ರಾಷ್ಟ್ರಪತಿಗಳು ಚಾಲನೆ ನೀಡಿದ್ದರು. ನಿನ್ನೆ ರಾತ್ರಿ ನಗರದಲ್ಲೇ ವಾಸ್ತವ್ಯಹೂಡಿದ್ದ ರಾಷ್ಟ್ರಪತಿಗಳು ಇಂದು ಬೆಳಗ್ಗೆ ಎಚ್‍ಎಎಲ್ ವಿಮಾನ ನಿಲ್ದಾಣದಿಂದ ವಾಯುಸೇನೆಯ ವಿಮಾನದ ಮೂಲಕ ಮಂಗಳೂರಿಗೆ ತೆರಳಿದರು.

ಮಂಗಳೂರಿಗೆ ತೆರಳಿದ ರಾಷ್ಟ್ರಪತಿ : 

ಬೆಂಗಳೂರು, ಜೂ.18- ನಮ್ಮ ಮೆಟ್ರೋ ರೈಲು ಉದ್ಘಾಟನೆಗಾಗಿ ನಗರಕ್ಕೆ ಆಗಮಿಸಿದ್ದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಇಂದು ಬೆಳಗ್ಗೆ ಎಚ್‍ಎಎಲ್ ವಿಮಾನ ನಿಲ್ದಾಣದ ಮೂಲಕ ಮಂಗಳೂರಿಗೆ ತೆರಳಿದರು.  ಎಚ್‍ಎಎಲ್ ವಿಮಾನ ನಿಲ್ದಾಣದಲ್ಲಿ ವಾಯು ಸೇನೆ ವಿಮಾನ ಮೂಲಕ ಮಂಗಳೂರಿಗೆ ತೆರಳಿದ ರಾಷ್ಟ್ರಪತಿಗಳನ್ನು ರಾಜ್ಯಪಾಲ ವಿ.ಆರ್.ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರದ ಮುಖ್ಯಕಾರ್ಯದರ್ಶಿ ಸುಭಾಷ್ ಚಂದ್ರ ಖುಂಟಿಆ, ರಾಜ್ಯ ಪೆÇಲೀಸ್ ಮಹಾನಿರ್ದೇಶಕ ಆರ್.ಕೆ.ದತ್ತ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರವೀಣ್‍ಸೂದ್ ಅವರು ಬೀಳ್ಕೊಟ್ಟರು.

ನಿನ್ನೆ ಸಂಜೆ ವಿಧಾನಸೌಧದ ಆವರಣದಲ್ಲಿ ಸಂಪಿಗೆ ರಸ್ತೆಯಿಂದ ಯಲಚೇನಹಳ್ಳಿವರೆಗಿನ ಹಸಿರು ಮೆಟ್ರೋ ರೈಲಿಗೆ ರಾಷ್ಟ್ರಪತಿಗಳು ಚಾಲನೆ ನೀಡಿದ್ದರು.
ನಿನ್ನೆ ರಾತ್ರಿ ನಗರದಲ್ಲೇ ವಾಸ್ತವ್ಯಹೂಡಿದ್ದ ರಾಷ್ಟ್ರಪತಿಗಳು ಇಂದು ಬೆಳಗ್ಗೆ ಎಚ್‍ಎಎಲ್ ವಿಮಾನ ನಿಲ್ದಾಣದಿಂದ ವಾಯುಸೇನೆಯ ವಿಮಾನದ ಮೂಲಕ ಮಂಗಳೂರಿಗೆ ತೆರಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin