ಲಾರಿಗೆ ಮತ್ತೊಂದು ಲಾರಿ ಡಿಕ್ಕಿ, ಚಾಲಕ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

acci

ನೆಲಮಂಗಲ, ನ.14- ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಾಲಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಲಮಂಗಲ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಾಸನದ ರವಿಕುಮಾರ್ (35) ಮುಂಜಾನೆ 3.30ರ ಸುಮಾರಿಗೆ ಬೆಂಗಳೂರಿನಿಂದ ತುಮಕೂರಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವಾಗ ಹಿಂದಿನಿಂದ ವೇಗವಾಗಿ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ.

ಪರಿಣಾಮವಾಗಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯನ್ನು ರಸ್ತೆಯ ಬಲ ಬದಿಗೆ ಎಳೆದಿದ್ದಾರೆ. ಈ ವೇಳೆ ಡಿವೈಡರ್‍ಗೆ ಹೊಡೆದು ನಂತರ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ ಚಾಲಕನಿಗೆ ಪೆಟ್ಟಾಗಿ ಮೃತಪಟ್ಟಿದ್ದಾನೆ.
ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin