ವಾಯುವಿಹಾರ ಮಾಡುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದು ಪತ್ನಿ ಎದುರಲ್ಲೇ ಪ್ರಾಣ ಬಿಟ್ಟ ಪತಿ..!

ಈ ಸುದ್ದಿಯನ್ನು ಶೇರ್ ಮಾಡಿ

Accident--01

ವಿಜಯಪುರ, ಜು.12- ವಾಯುವಿಹಾರ ಮಾಡುತ್ತಿದ್ದ ವ್ಯಕ್ತಿಗೆ ಬೋರ್‍ವೆಲ್ ಲಾರಿಯೊಂದು ಡಿಕ್ಕಿ ಹೊಡೆದು ಆತ ಪತ್ನಿ ಎದುರಲ್ಲೇ ಪ್ರಾಣ ಬಿಟ್ಟ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನಡೆದಿದೆ. ಇಂದು ಬೆಳಗ್ಗೆ ಸುಮಾರು 6 ಗಂಟೆ ಸಂದರ್ಭದಲ್ಲಿ ಇಂಡಿ ಪಟ್ಟಣದ ನಿವಾಸಿ ಗೋಪಾಲ ಹಡಪದ (56) ಎಂಬುವರು ವಾಯುವಿಹಾರಕ್ಕೆ ತೆರಳಿ ಮನೆಗೆ ವಾಪಸಾಗುತ್ತಿದ್ದರು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಲಾರಿ ಅವರ ಮೇಲೆ ಹರಿದು ಪರಾರಿಯಾಗಿದೆ.

ಇದನ್ನು ನೋಡಿದ ಅವರ ಪತ್ನಿ ತೀವ್ರವಾಗಿ ಗಾಯಗೊಂಡಿದ್ದ ಪತಿಯನ್ನು ಕೊಂಡೊಯ್ಯಲು ನೆರವಿಗೆ ಕೂಗಿದ್ದಾರೆ. ಅಷ್ಟರಲ್ಲಿ ಗೋಪಾಲ ಹಡಪದ ಅವರು ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರಕರಣ ದಾಖಲಿಸಿ ಪರಾರಿಯಾಗಿರುವ ಲಾರಿ ಚಾಲಕನಿಗಾಗಿ ಬಲೆ ಬೀಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin