ವಿಜಯಪುರ : ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ರೈಲು ದುರಂತ

ಈ ಸುದ್ದಿಯನ್ನು ಶೇರ್ ಮಾಡಿ
ಸಾಂಧರ್ಭಿಕ ಚಿತ್ರ
ಸಾಂಧರ್ಭಿಕ ಚಿತ್ರ

ವಿಜಯಪುರ, ಮಾ.12-ಚಾಲಕನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದೆ. ವಿಜಯಪುರ-ಹುಬ್ಬಳ್ಳಿ ಪ್ಯಾಸೆಂಜರ್ ರೈಲು ವಿಜಯಪುರ ತಾಲೂಕಿನ ಅಲಿಯಾಬಾದ್ ಬಳಿ ಬರುತ್ತಿದ್ದಾಗ ರೈಲು ಚಾಲಕ ರೈಲಿನ ಹಳಿ ಬಿರುಕು ಬಿಟ್ಟಿರುವುದನ್ನು ಗಮನಿಸಿ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ನಂತರ ಬಿರುಕು ಬಿಟ್ಟ ಕಂಬಿಗಳನ್ನು ದುರಸ್ತಿ ಮಾಡಲು 45 ನಿಮಿಷ ಬೇಕಾಗಿದ್ದರಿಂದ ರೈಲು ಪ್ರಯಾಣ 45 ನಿಮಿಷ ತಡವಾಗಿದೆ. ಮಾರ್ಗದಲ್ಲಿ ಇದೀಗ ಸುಗಮ ಸಂಚಾರ ನಡೆಯುತ್ತಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin