ಶಾಸಕರು ಆತ್ಮಸಾಕ್ಷಿಯಿಂದ ನಡೆದುಕೊಳ್ಳುತ್ತಾರೆಂಬ ನಂಬಿಕೆಯಿದೆ : ಬೊಮ್ಮಾಯಿ

ಈ ಸುದ್ದಿಯನ್ನು ಶೇರ್ ಮಾಡಿ

Basavaraj-Bommai
ಬೆಂಗಳೂರು,ಮೇ18- ಕಾಂಗ್ರೆಸ್ ಹಿಂಬಾಗಿಲ ಮೂಲಕ ಮತ್ತೆ ಅಧಿಕಾರ ಸವಿಯುವ ಪ್ರಯತ್ನ ನಡೆಸಿದೆ. ಜನಾದೇಶದಲ್ಲಿ ಸೋಲು ಕಂಡಿದ್ದರೂ ಕುತಂತ್ರ ನಡೆಸುತ್ತಿದೆ ಎಂದು ಮಾಜಿ ಸಚಿವ, ಬಿಜೆಪಿ ಹಿರಿಯ ಮುಖಂಡ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನಬದ್ಧವಾಗಿ ನಾವು ನಡೆದುಕೊಂಡಿದ್ದೇವೆ. ರಾಜ್ಯಪಾಲರೂ ಕೂಡ ಅತಿದೊಡ್ಡ ಪಕ್ಷವಾದ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ನೀಡಿದ್ದಾರೆ. ಆದರೆ ಇದನ್ನು ಕಾಂಗ್ರೆಸ್ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಹೌಹಾರಾರುತ್ತಿದೆ. ಅವರ ವಾಮಮಾರ್ಗದ ಪ್ರಯತ್ನ ಸಫಲವಾಗದು ಎಂದರು. ಅವಿಶ್ವಾಸ ನಿರ್ಣಯ ಸಂದರ್ಭದಲ್ಲಿ ಆತ್ಮಸಾಕ್ಷಿಯಿಂದ ಶಾಸಕರು, ನಡೆದುಕೊಳ್ಳುತ್ತಾರೆ ಎಂದು ನನಗೆ ವಿಶ್ವಾಸವಿದೆ. ಹಿಂದೆ ಪಕ್ಷವನ್ನು ನಾಶ ಮಾಡಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಹೋರಾಟ ನಡೆಸಿದ್ದ ಜೆಡಿಎಸ್‍ನವರು ಈಗ ಮತ್ತೆ ಅವರೊಂದಿಗೇ ಸೇರಿ ಅಪವಿತ್ರ ಮೈತ್ರಿ ಮಾಡಿಕೊಳ್ಳುವುದು ದುರದೃಷ್ಟಕರ. ಜನರು ಎಲ್ಲವನ್ನು ನೋಡುತ್ತಿದ್ದಾರೆ ಎಂದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin