ಶಿವಮೊಗ್ಗದಲ್ಲಿ ತಡರಾತ್ರಿ ಝಳಪಿಸಿದ ಮಾರಕಾಸ್ತ್ರಗಳು, ವ್ಯಕ್ತಿಯೊಬ್ಬನ ಬರ್ಬರ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಶಿವಮೊಗ್ಗ, ಸೆ.19- ತಡರಾತ್ರಿ ನಗರದಲ್ಲಿ ಮಾರಕಾಸ್ತ್ರಗಳು ಝಳಪಿಸಿದ್ದು, ದುಷ್ಕರ್ಮಿಗಳು ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಟಿಪ್ಪು ನಗರದ ಶಾದಿ ಮಹಲ್ ಬಳಿ ನಡೆದಿದೆ. ಮುಕ್ತಿಯಾರ್ ಮೃತಪಟ್ಟ ವ್ಯಕ್ತಿ.  ಈತ ಕಳೆದ ರಾತ್ರಿ ಶಾದಿ ಮಹಲ್ ಬಳಿ ನಿಂತಿದ್ದಾಗ ಏಕಾಏಕಿ ಮಾರಕಾಸ್ತ್ರಗಳೊಂದಿಗೆ ಎರಗಿದ ದುಷ್ಕರ್ಮಿಗಳು ಆತನನ್ನು ಮನಬಂದಂತೆ ಹೊಡೆದು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಮೇಲ್ನೋಟಕ್ಕೆ ಇದು ಹಳೆ ದ್ವೇಷ ಇರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ತುಂಗಾ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin