ಶ್ರೀಘ್ರದಲ್ಲೇ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಪೂರ್ಣ : ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiaha-CM--01

ದಾವಣಗೆರೆ, ಸೆ.25- ಜಿಲ್ಲೆಯ 36 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ತ್ವರಿತಗತಿಯಲ್ಲಿ ಮುಂದುವರಿದಿದ್ದು, ಮುಂಬರುವ ದಿನಗಳಲ್ಲಿ ಕೆರೆಗಳಿಗೆ ನೀರು ತುಂಬಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಿನ್ನೆ ಚಿತ್ರದುರ್ಗ ಜಿಲ್ಲೆ ಸಿರಿಗೆರೆಯಲ್ಲಿ ನಡೆದ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯವರ 25ನೆ ಕುಸುಮಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭ ಅವರು ಈ ವಿಷಯ ತಿಳಿಸಿದರು. ಏಳು ಸಾವಿರ ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಎಲ್ಲ ಕೆರೆಗಳಿಗೂ ನೀರು ತುಂಬಿಸುವ ಯೋಜನೆ ಕಾಮಗಾರಿಗಳು ನಡೆಯುತ್ತಿವೆ. ಅನೇಕ ಕೆರೆಗಳಿಗೆ ಈಗಾಗಲೇ ನೀರು ತುಂಬಿಸಲಾಗಿದೆ. ಇನ್ನು ಎರಡು ವರ್ಷಗಳಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಅವರು ಹೇಳಿದರು.

ದಾವಣಗೆರೆ ನಗರ ಹಾಗೂ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಿದ್ದು, ಕೆರೆಗಳಿಗೆ ನೀರು ತುಂಬಿಸಿದರೆ ಸಮಸ್ಯೆ ಬಗೆಹರಿಯಲಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಸಿರಿಗೆರೆ ಶ್ರೀಗಳು, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ, ಸಚಿವ ಎಚ್.ಆಂಜನೇಯ ಉಪಸ್ಥಿತರಿದ್ದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin