ಸಂಸತ್‍ನ ಉಭಯ ಸದನಗಳ ಸದಸ್ಯರಿಗೆ ನಿರ್ಗಮಿತ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಔತಣಕೂಟ

ಈ ಸುದ್ದಿಯನ್ನು ಶೇರ್ ಮಾಡಿ

Pranab-Mukharjee--01

ನವದೆಹಲಿ,ಜು.23- ನಿರ್ಗಮಿತ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಇಂದು ಸಂಸತ್‍ನ ಉಭಯ ಸದನಗಳ ಸದಸ್ಯರಿಗೆ ಔತಣ ಕೂಟ ಏರ್ಪಡಿಸಿದ್ದಾರೆ. ಸಂಜೆ ಸಂಸತ್‍ನ ಸೆಂಟ್ರಲ್ ಹಾಲ್‍ನಲ್ಲಿ ದೇಶದ ಪ್ರಥಮ ಪ್ರಜೆಯಾಗಿರುವ ಮುಖರ್ಜಿ ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರಿಗಾಗಿ ಔತಣಕೂಟವನ್ನು ಹಮ್ಮಿಕೊಂಡಿದ್ದಾರೆ.  ನಿನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಪತಿಯವರಿಗಾಗಿ ಔತಣಕೂಟ ಏರ್ಪಡಿಸಿದ್ದರು. ಸಂಜೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮೋದಿ, ಲೋಕಸಭೆಯ ಸ್ಪೀಕರ್ ಸುಮಿತ್ರಾ ಮಹಾಜನ್ ಸೇರಿದಂತೆ ಕೇಂದ್ರ ಸಚಿವರು, ಪ್ರತಿಪಕ್ಷಗಳ ನಾಯಕರು ಪಾಲ್ಗೊಳ್ಳಲಿದ್ದಾರೆ.
ಈ ವೇಳೆ ನಿರ್ಗಮಿತ ರಾಷ್ಟ್ರಪತಿಗಾಗಿ ಸ್ಪೀಕರ್ ಸುಮಿತ್ರಾ ಮಹಾಜನ್ ವಿದಾಯದ ಭಾಷಣ ಮಾಡಲಿದ್ದಾರೆ. ಹಾಲಿ ಸಂಸದರ ಜೊತೆಗೆ ಮಾಜಿ ಸಂಸದರನ್ನು ಸಹ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

ನಾಳೆ ಪ್ರಣಬ್ ಮುಖರ್ಜಿ ಅವರ ಅಧಿಕಾರಾವಧಿ ಕೊನೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳಿಗಾಗಿ ಸಂಸತ್ ಸದಸ್ಯರು ವಿಶೇಷ ನೆನಪಿನ ಕಾಣಿಕೆ ನೀಡಲಿದ್ದಾರೆ ಜೊತೆಗೆ ರಾಷ್ಟ್ರಪತಿಗಳಿಗಾಗಿ ಸ್ಪೀಕರ್ ಅವರು ವಿಶೇಷ ಶಾಲು ಮತ್ತು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಿದ್ದಾರೆ. ಪ್ರಣಬ್ ಮುಖರ್ಜಿ ಅವರ ತವರೂರು ಪಶ್ಚಿಮ ಬಂಗಾಳದಲ್ಲಿ ತಯಾರಿಸಿರುವ ಶಾಲನ್ನು ಹೊದಿಸಿ ಸನ್ಮಾನ ಮಾಡಲಿದ್ದಾರೆ. ನೆನಪಿನ ಕಾಣಿಕೆಯನ್ನು ಉತ್ತರಪ್ರದೇಶ ಮತ್ತು ತಮಿಳುನಾಡಿನ ಕಲಾವಿದರು ತಯಾರಿಸಿದ್ದಾರೆ. ಬಳಿಕ ಮುಖರ್ಜಿ ಅವರು ಸಂಸತ್‍ನ ಹಾಜರಾತಿ ಪುಸ್ತಕದಲ್ಲಿ ತಮ್ಮ ಅನುಭವವನ್ನು ಹಂಚಿಕೊಳ್ಳಲಿದ್ದಾರೆ.

ಭಾರತೀಯ ಸೇನಾಪಡೆಯ ಮುಖ್ಯಸ್ಥರೂ ಆಗಿರುವ ರಾಷ್ಟ್ರಪತಿಯವರು ಈಗಾಗಲೇ ವಾಯುಸೇನೆ, ಭೂಸೇನೆ ಮತ್ತು ನೌಕಾದಳದ ಮುಖ್ಯಸ್ಥರ ಜೊತೆ ಮಾತುಕತೆ ನಡೆಸಿದ್ದು , ಅಧಿಕಾರವನ್ನು ನಾಳೆ ಅಧಿಕೃತವಾಗಿ ಹಸ್ತಾಂತರ ಮಾಡಲಿದ್ದಾರೆ.  ಮಂಗಳವಾರ 12.45ಕ್ಕೆ ಸರಿಯಾಗಿ ನೂತನ ರಾಷ್ಟ್ರಪತಿಯಾಗಿರುವ ರಾಮನಾಥ್ ಕೋವಿಂದ್ ಅವರು ಐತಿಹಾಸಿಕ ಸಂಸತ್‍ನ ಸೆಂಟ್ರಲ್ ಹಾಲ್‍ನಲ್ಲಿ ದೇಶದ 14ನೇ ರಾಷ್ಟ್ರಪತಿ ಅಧಿಕಾರ ಸ್ವೀಕರಿಸಲಿದ್ದಾರೆ.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಖೆಹರ್ ಸಿಂಗ್ ಅವರು ನೂತನ ರಾಷ್ಟ್ರಪತಿ ಅವರಿಗೆ ಅಧಿಕಾರ ಗೌಪ್ಯತೆ ಬೋಧಿಸಲಿದ್ದಾರೆ. ನಿರ್ಗಮಿತ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ರಾಷ್ಟ್ರಪತಿ ಭವನ ಬಿಟ್ಟ ಬಳಿಕ ದೆಹಲಿಯ ರಾಜಾಜಿ ಮಾರ್ಗ್ -10ನಲ್ಲಿ ವಾಸ ಮಾಡಲಿದ್ದಾರೆ.   ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರು ಇದೇ ಮನೆಯಲ್ಲಿ ವಾಸವಾಗಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin