ಸಚಿವ ಸ್ಥಾನಕ್ಕಾಗಿ ‘ಕಾಂಜೆ’ ಸರ್ಕಾರದಲ್ಲಿ ಒಳಗೊಳಗೇ ಲಾಬಿ

ಈ ಸುದ್ದಿಯನ್ನು ಶೇರ್ ಮಾಡಿ

Congress-JDS--01
ಬೆಂಗಳೂರು, ಮೇ 20- ಬಿಜೆಪಿ ಸರ್ಕಾರ ಪತನಗೊಂಡ ಬೆನ್ನಲ್ಲೇ ಮೈತ್ರಿ ಸರ್ಕಾರದಲ್ಲಿ ಸಚಿವರಾಗುವವರ ಲಾಬಿ ಶುರುವಾಗಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಬುಧವಾರ ಅಸ್ತಿತ್ವಕ್ಕೆ ಬರಲಿದ್ದು, ಸಚಿವ ಸ್ಥಾನ ಪಡೆಯಲು ಉಭಯ ಪಕ್ಷಗಳ ಶಾಸಕರು ನಾನಾ ರೀತಿಯ ಪ್ರಯತ್ನವನ್ನು ಮಾಡುತ್ತಿದ್ದಾರೆ.  ಪ್ರದೇಶವಾರು, ಜಾತಿ ಆಧಾರದ ಮೇಲೆ ಹಾಗೂ ಹಿರಿತನ ಸೇರಿದಂತೆ ಹಲವು ಮಾನದಂಡಗಳನ್ನು ಮುಂದಿಟ್ಟುಕೊಂಡು ಸಚಿವ ಸ್ಥಾನದ ಬೇಡಿಕೆಯನ್ನು ತಮ್ಮ ತಮ್ಮ ವರಿಷ್ಠರ ಮುಂದೆ ಇಡುತ್ತಿದ್ದಾರೆ.

ಮೊದಲ ಬಾರಿಗೆ ಶಾಸಕರಾಗಿರುವವರೂ ಕೂಡ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಹೀಗಾಗಿ ಉಭಯ ಪಕ್ಷಗಳ ನಾಯಕರಿಗೆ ಸಚಿವದ ಸ್ಥಾನದ ಹಂಚಿಕೆ ಮಾಡುವುದು ಸವಾಲಾಗಿ ಪರಿಣಮಿಸಿದೆ. ವಿಶ್ವಾಸಮತ ಯಾಚನೆ ನಂತರ ಸಂಪುಟ ವಿಸ್ತರಣೆ ಮಾಡುವ ಉದ್ದೇಶವನ್ನು ಉಭಯ ಪಕ್ಷಗಳ ನಾಯಕರು ಹೊಂದಿದ್ದಾರೆ. ಆದರೂ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ತಮ್ಮದೇ ಆದ ರೀತಿಯಲ್ಲಿ ಪ್ರಭಾವ, ಶಿಫಾರಸು ಮಾಡುತ್ತಾ ಸಚಿವ ಸ್ಥಾನವನ್ನು ಪಡೆಯಲು ಹರಸಾಹಸ ಪಡುತ್ತಿದ್ದಾರೆ. ಈಗಾಗಲೇ ಹಲವು ಮಂದಿ ತಮ್ಮ ಬೇಡಿಕೆಯನ್ನು ವರಿಷ್ಠರ ಮುಂದಿಟ್ಟಿದ್ದಾರೆ. ಆದರೆ, ಉಭಯ ಪಕ್ಷಗಳ ನಾಯಕರು ಸರ್ಕಾರ ರಚನೆಯಾಗುವವರೆಗೂ ಯಾರಿಗೂ ಸಚಿವ ಸ್ಥಾನದ ಖಾತ್ರಿ ನೀಡಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin