ಸಾಂಸ್ಕೃತಿಕ ನಗರಿಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 9 ವರ್ಷದ ಬಾಲಕಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Rape-Girl--01
ಮೈಸೂರು, ಏ.24- ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಒಂಭತ್ತು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಮೈಸೂರನ್ನು ಬೆಚ್ಚಿ ಬೀಳಿಸಿದೆ. ಕಳೆದ ಭಾನುವಾರ ಬಾಲಕಿಯನ್ನು ಅಪಹರಿಸಿದ್ದ ಕೆಲ ಪುಂಡರ ಗುಂಪೊಂದು ಆಕೆಯ ಮೇಲೆ ಅತ್ಯಾಚಾರವೆಸಗಿದ್ದ ನಂತರ ಮನೆಗೆ ಕಳುಹಿಸಿದ್ದರು. ನಂತರ ಇದನ್ನು ಯಾರಿಗೂ ಹೇಳದ ಬಾಲಕಿ ರಾತ್ರಿ ಮಲಗಿದ್ದಾಗ ಹೊಟ್ಟೆನೋವು ಕಾಣಿಸಿಕೊಂಡಿತ್ತು. ತಕ್ಷಣ ಪೋಷಕರು ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಾಗ ವಾಂತಿಯಾಗಿ ಅಸ್ವಸ್ಥಗೊಂಡಿತ್ತು.

ನಂತರ ಪರೀಕ್ಷಿಸಿದ ವೈದ್ಯರು ಆಕೆಯ ಮೇಲೆ ಅತ್ಯಾಚಾರ ನಡೆದಿರುವುದು ಗೊತ್ತಾಗಿ ಪೋಷಕರು ಬೆಚ್ಚಿ ಬಿದ್ದಿದ್ದಾರೆ. ಕೆ.ಆರ್.ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಅಲ್ಲಿಗೆ ಕರೆದೊಯ್ಯುವಷ್ಟರಲ್ಲಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸುದ್ದಿ ತಿಳಿದು
ಸ್ಥಳಕ್ಕೆ ಧಾವಿಸಿದ ನರಸಿಂಹರಾಜ ಠಾಣೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಕೇಂದ್ರ ಸರ್ಕಾರ ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅಪರಾಧಿಗಳಿಗೆ ಗಲ್ಲು ಶಿಕ್ಷೆ, ಸುಗ್ರೀವಾಜ್ಞೆ ಘೋಷಣೆಯ ದಿನವೇ ಈ ಕೃತ್ಯ ನಡೆದಿದೆ. ಕಾಮುಕರ ಪತ್ತೆಗೆ ವಿಶೇಷ ತಂಡವನ್ನು ಕೂಡ ರಚಿಸಲಾಗಿದ್ದು , ಚುನಾವಣೆ ಸಂದರ್ಭದಲ್ಲೇ ಈ ಕೃತ್ಯ ನಡೆದಿದ್ದು , ಪೊಲೀಸರಿಗೆ ಭಾರೀ ತಲೆನೋವಾಗಿ ಪರಿಣಮಿಸಿದೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin