ಸ್ಪರ್ಧೆಯಿಂದ ಶ್ರೀರಾಮು ಅನರ್ಹಗೊಳಿಸುವಂತೆ ಆಯೋಗಕ್ಕೆ ಕಾಂಗ್ರೆಸ್ ದೂರು

ಈ ಸುದ್ದಿಯನ್ನು ಶೇರ್ ಮಾಡಿ

Ramulu--01
ನವದೆಹಲಿ, ಮೇ 11- ಸುಪ್ರೀಂಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಅವರ ಸಂಬಂಧಿಕರಿಗೆ ಲಂಚ ನೀಡಲು ಯತ್ನಿಸಿರುವ ವಿಡಿಯೋ ದೃಶ್ಯಗಳು ಬಹಿರಂಗಗೊಂಡಿರುವುದರಿಂದ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ಅವರನ್ನು ವಿಧಾನಸಭೆ ಚುನಾವಣೆ ಸ್ಪರ್ಧೆಯಿಂದ ಅನರ್ಹಗೊಳಿಸುವಂತೆ ಕಾಂಗ್ರೆಸ್ ಇಂದು ಕೇಂದ್ರ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿದೆ.

ಬಿ.ಶ್ರೀರಾಮಲು (ಬಾಗಲಕೋಟೆ ಜಿಲ್ಲೆ ಬಾದಾಮಿ ವಿಧಾನಸಭಾ ಕ್ಷೇತ್ರ ಮತ್ತು ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ) ಅವರನ್ನು ಚುನಾವಣಾ ಸ್ಪರ್ಧೆಯಿಂದ ಅನರ್ಹಗೊಳಿಸಬೇಕೆಂದು ಚುನಾವಣಾ ಆಯೋಗಕ್ಕೆ ನಾವು ಮನವಿ ಮಾಡಿದ್ದೇವೆ ಎಂದು ಕಾಂಗ್ರೆಸ್ ಧುರೀಣ ಕಪಿಲ್ ಸಿಬಲ್ ದೆಹಲಿಯಲ್ಲಿ ಚುನಾವಣಾ ಸಮಿತಿ ಸಭೆ ನಂತರ ಸುದ್ದಿಗಾರರಿಗೆ ತಿಳಿಸಿದರು.

2010ರಲ್ಲಿ ಬಿಜೆಪಿ ನಾಯಕರಾದ ಬಿ.ಶ್ರೀರಾಮುಲು ಮತ್ತು ಗಾಲಿ ಜನಾರ್ಧನ ರೆಡ್ಡಿ ಅವರು ಗಣಿ ಪ್ರಕರಣದಲ್ಲಿ ತಮ್ಮ ಪರವಾಗಿ ತೀರ್ಪು ನೀಡುವಂತೆ ಮಾಡಲು ಭಾರತದ ನಿವೃತ್ತ ಮುಖ್ಯ ನ್ಯಾಯಮೂರ್ತಿ ಅವರ ಸಂಬಂಧಿಯೊಬ್ಬರಿಗೆ ಹಣದ ಆಮೀಷವೊಡ್ಡಿದರನ್ನೆಲಾದ ಎರಡು ವೀಡಿಯೋಗಳನ್ನು ನಿನ್ನೆ ಕಾಂಗ್ರೆಸ್ ಬಿಡುಗಡೆ ಮಾಡಿತ್ತು. ಈ ವೀಡಿಯೋಗಳು ಸ್ಥಳೀಯ ಸುದ್ದಿ ವಾಹಿನಿಯೊಂದರಲ್ಲಿ ಪ್ರಸಾರವಾಗಿತ್ತು. ಇದನ್ನು ಪ್ರಸಾರ ಮಾಡದಂತೆ ಚಾನೆಲ್‍ಗಳಿಗೆ ರಾಜ್ಯ ಚುನಾವಣಾ ಅಧಿಕಾರಿಗಳು ಸೂಚನೆ ನೀಡಿದ್ದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin