ಸ್ಮಾರಕವಾಗಿ ಪರಿವರ್ತನೆಯಾಗಲಿದೆ ಜನರಲ್ ತಿಮ್ಮಯ್ಯ ಅವರ ನಿವಾಸ

ಈ ಸುದ್ದಿಯನ್ನು ಶೇರ್ ಮಾಡಿ

Timmayya--002

ಬೆಳಗಾವಿ, ನ.20-ಮಡಿಕೇರಿಯಲ್ಲಿ ಆದಷ್ಟು ಶೀಘ್ರ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಜನರಲ್ ತಿಮ್ಮಯ್ಯ ಅವರ ನಿವಾಸವನ್ನು ಸ್ಮಾರಕವನ್ನಾಗಿ ನಿರ್ಮಾಣ ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಸಚಿವೆ ಉಮಾಶ್ರೀ ಅವರು ವಿಧಾನಪರಿಷತ್‍ನಲ್ಲಿಂದು ತಿಳಿಸಿದರು. ಜನರಲ್ ತಿಮ್ಮಯ್ಯ ಅವರ ನಿವಾಸವನ್ನು ಸ್ಮಾರಕ ಮಾಡುವ ಸಂಬಂಧ 2013ರಲ್ಲಿ ಐದೂವರೆ ಕೋಟಿ ಮೊತ್ತದಲ್ಲಿ ಕಾಮಗಾರಿ ನಡೆಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈಗಾಗಲೇ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಸದಸ್ಯೆ ವೀಣಾ ಅಚ್ಚಯ್ಯ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಕಾಮಗಾರಿಗೆ 45 ಲಕ್ಷ ರೂ. ಬಿಡುಗಡೆಯಾಗಿದ್ದರೂ, ಕೆಲವು ತಾಂತ್ರಿಕ ಕಾರಣಗಳಿಂದ ಅನುದಾನ ಬಿಡುಗಡೆಯಾಗಿಲ್ಲ. ಜನರಲ್ ತಿಮ್ಮಯ್ಯ ಅವರು ವಾಸಿಸುತ್ತಿದ್ದ ಮನೆಯಲ್ಲಿ ಸಾರಿಗೆ ಇಲಾಖೆ ಕಾರ್ಯನಿರ್ವಹಿಸುತ್ತಿದ್ದರಿಂದ ವಿಳಂಬವಾಗಿದೆ. ಶೀಘ್ರದಲ್ಲೇ ಕಟ್ಟಡವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ಹಸ್ತಾಂತರಿಸಲಾಗುವುದು. ಅನುದಾನ ಬಿಡುಗಡೆ ಮಾಡುವ ಸಂಬಂಧ ಅಧಿಕಾರಿಗಳ ಜೊತೆ ಸಭೆ ನಡೆಸಿ ಆದಷ್ಟು ಶೀಘ್ರ ಲೋಕಾರ್ಪಣೆ ಮಾಡುವುದಾಗಿ ಹೇಳಿದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin