ಹೆತ್ತ ತಾಯಿ ಮೇಲೆ ಹಲ್ಲೆ ನಡೆಸಿ ಆತ್ಮಹತ್ಯೆಗೆ ಶರಣಾದ ಮಗ

ಈ ಸುದ್ದಿಯನ್ನು ಶೇರ್ ಮಾಡಿ

Hang-Suicide--01

ಚನ್ನಪಟ್ಟಣ, ಮೇ 22- ತಾಯಿ ಮೇಲೆ ಹಲ್ಲೆ ನಡೆಸಿದ ಮಗ ಭಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮೇಶ್ (30) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ.  ತಾಲ್ಲೂಕಿನ ಸಿದ್ದನಹಳ್ಳಿ ಗ್ರಾಮದ ಚಿಕ್ಕನಾಥಪ್ಪ ಎಂಬುವರ ಮಗನಾದ ಈತ ತನ್ನ ತಾಯಿ ಮೇಲೆ ಹಲ್ಲೆ ನಡೆಸಿ ನಂತರ ಈ ರೀತಿಯ ಸ್ವಯಂ ಕೃತ್ಯಕ್ಕೆ ಒಳಗಾಗಿದ್ದಾನೆ. ಬೈರನಾಯ್ಕನಹಳ್ಳಿಯಲ್ಲಿ ಕೆಲ ತಿಂಗಳ ಹಿಂದೆ ವಾಟರ್‍ಮನ್ ಕೆಲಸ ನಿರ್ವಹಿಸುತ್ತಿದ್ದ. ಕೆಲ ಕಾರಣಗಳಿಂದ ಕೆಲಸದಿಂದ ಹೊರಗಡೆ ಬಂದಿದ್ದನೆನ್ನಲಾಗಿದ್ದು, ಮದ್ಯವ್ಯಸನಿಯಾಗಿದ್ದ ಈತ ವಯಸ್ಸಾದ ತಂದೆ-ತಾಯಿ ಮೇಲೆ ವಿನಾಕಾರಣ ಆಗಾಗ್ಗೆ ಹಲ್ಲೆ ನಡೆಸುತ್ತಿದ್ದನೆನ್ನಲಾಗಿದೆ.

ನಿನ್ನೆ ಅದೇ ರೀತಿ ತನ್ನ ತಾಯಿ ಮೇಲೆ ಹಲ್ಲೆ ನಡೆಸಿದನೆನ್ನಲಾಗಿದ್ದು, ಪ್ರಜ್ಞೆತಪ್ಪಿದ ಆಕೆಯನ್ನು ನೋಡಿ ಬೆದರಿದ ಈತ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಿಂಗಳ ಹಿಂದೆ ಸ್ಥಳೀಯ ಪೊಲೀಸ್ ಪೇದೆಯೊಬ್ಬರ ಮೇಲೂ ಹಲ್ಲೆ ನಡೆಸಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಕೆಲ ದಿನಗಳ ಹಿಂದೆ ಹೊರಗೆ ಬಂದಿದ್ದ. ಮೃತದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ. ಈ ಪ್ರಕರಣದ ಬಗ್ಗೆ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin