ಹೊಸ ಬಾಂಬ್ ಸಿಡಿಸಿದ ಶ್ರೀರಾಮುಲು..!

ಈ ಸುದ್ದಿಯನ್ನು ಶೇರ್ ಮಾಡಿ

Sriramulu--01-BJP

ಬೆಂಗಳೂರು, ಮೇ 17- ವಿಶ್ವಾಸ ಮತಯಾಚನೆ ವೇಳೆ ನೀವು ನಿರೀಕ್ಷಿಸಿದಷ್ಟು ಹೆಚ್ಚು ಸಂಖ್ಯೆಯಲ್ಲಿ ನಾವು ಗೆಲ್ಲುತ್ತೇವೆ ಎಂದು ಸಂಸದ ಶ್ರೀರಾಮುಲು ಹೇಳಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾದೇಶ ನಮ್ಮ ಪರವಾಗಿದೆ. ಅನೇಕರು ಕಾಂಗ್ರೆಸ್-ಜೆಡಿಎಸ್ ಜತೆಗೂಡಿ ಸರ್ಕಾರ ರಚಿಸಲು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರ ಫಲ ಬಿಜೆಪಿಗೆ ಸಿಗಲಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಮುಂದಿನ ಐದು ವರ್ಷ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದು, ರಾಜ್ಯದ ಅಭಿವೃದ್ಧಿ ಮತ್ತು ಜನರ ಆಶೋತ್ತರಕ್ಕೆ ಪರವಾಗಿ ದುಡಿಯುತ್ತೇವೆ ಎಂದು ಅವರು ಹೇಳಿದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin