ಕೆಎಸ್‍ಆರ್‍ಟಿಸಿ ಬಸ್ ಪಲ್ಟಿ : 23 ಮಂದಿ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

bus--accident

ಚಿತ್ರದುರ್ಗ, ಆ.16- ಚಾಲಕನ ನಿಯಂತ್ರಣ ತಪ್ಪಿ ಕೆಎಸ್‍ಆರ್‍ಟಿಸಿ ಬಸ್ ಪಲ್ಟಿ ಹೊಡೆದ ಪರಿಣಾಮ 23 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹೈಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ಇಂದು ಬೆಳ್ಳಂಬೆಳಗ್ಗೆ ಮೂರು ಗಂಟೆಯಲ್ಲಿ ಗುಲ್ಬರ್ಗಾದಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಾಜ್ಯ ಹೆದ್ದಾರಿ ಚಳ್ಳಕೆರೆ-ಹಿರಿಯೂರು ಮಾರ್ಗದ ಮಧ್ಯೆ ಚೆನ್ನಮ್ಮನಹಳ್ಳಿ ಸಮೀಪ ಪಲ್ಟಿ ಹೊಡೆದಿದೆ. ಘಟನೆಯಲ್ಲಿ 12 ಮಕ್ಕಳು ಸೇರಿದಂತೆ ಒಟ್ಟು 23 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಇವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಹೈಮಂಗಲ ಠಾಣೆ ಪಿಎಸ್‍ಐ ಉಮೇಶ್‍ಬಾಬು ಹಾಗೂ ಸಿಬ್ಬಂದಿಗಳು ಗಾಯಾಳುಗಳನ್ನು ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.ಈ ಸಂಬಂಧ ಹೈಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

► Follow us on –  Facebook / Twitter  / Google+

Facebook Comments

Sri Raghav

Admin