ಕಾತ್ರಿಕೆಹಾಳ್‍ಗೆ ನೂತನ ಮೊರಾರ್ಜಿ ವಸತಿ ಶಾಲೆ ಮಂಜೂರು

ಈ ಸುದ್ದಿಯನ್ನು ಶೇರ್ ಮಾಡಿ

ee-sanje

ಚಿಕ್ಕನಾಯಕನಹಳ್ಳಿ,ಆ.17- ನೂತನ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ತಾಲ್ಲೂಕಿನ ಕಂದಿಕೆರೆ ಹೋಬಳಿ ಕಾತ್ರಿಕೆಹಾಳ್ ಭಾಗಕ್ಕೆ ಮಂಜೂರು ಮಾಡಿರುವ ಸರ್ಕಾರವನ್ನು ಅಭಿನಂದಿಸುವುದಾಗಿ ಶಾಸಕ ಸಿ.ಬಿ.ಸುರೇಶ್‍ಬಾಬು ತಿಳಿಸಿದ್ದಾರೆ. ತಾಲ್ಲೂಕಿನಲ್ಲಿ ಮೂರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪರೀಕ್ಷೆಯಲ್ಲಿ ಹೆಚ್ಚು ಮಕ್ಕಳುಭಾಗವಹಿಸುತ್ತಿವೆ ಆದರೆ ಶಾಲೆಗಳ ಕೊರತೆಯಿಂದಾಗಿ ಮಕ್ಕಳ ಶಿಕ್ಷಣಕ್ಕೆ ಕೊರತೆ ಉಂಟಾಗುತ್ತಿತ್ತು. ಈ ಸಮಸ್ಯೆಯ ಬಗ್ಗೆ ಸರ್ಕಾರದ ಗಮನಕ್ಕೆ ತರುವ ಮೂಲಕ ಶಾಲೆಯ ಅಗತ್ಯತೆ ಬಗ್ಗೆ ಮನವರಿಕೆ ಮಾಡಿಕೊಟ್ಟ ಹಿನ್ನೇಲೆಯಲ್ಲಿ ಸರ್ಕಾರ ಕಾತ್ರಿಕೆಹಾಳ್ ಭಾಗಕ್ಕೆ ಮೂರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಮಂಜೂರು ಮಾಡಿರುವುದು ಸ್ವಾಗತಾರ್ಹ ಎಂದು ತಿಳಿಸಿದ್ದಾರೆ.
ಈ ಶಾಲೆಯಲ್ಲಿ ನೂರು ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದು, ಶಾಲೆಯು ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವುದರಿಂದ ಪರಿಶಿಷ್ಟ ಜಾತಿ 75 ವಿದ್ಯಾರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡದ 25 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುವುದು.ಮೊದಲು ಶಾಲೆಗೆ ಅಗತ್ಯವಿರುವ ಎಂಟರಿಂದ ಹತ್ತು ಎಕರೆ ಜಮೀನನ್ನು ಗುರುತಿಸಿ, ಅವಶ್ಯಕವಿರುವ ಕಟ್ಟಡ ಮತ್ತು ಇತರೆ ಮೂಲಭೂತ ಸೌಕರ್ಯಗಳನ್ನು ಒದಗಿಸಿದ ನಂತರವೇ ಮಕ್ಕಳನ್ನು ನಿಯಮಗಳಂತೆ ದಾಖಲಿಸಿಕೊಳ್ಳಲಾಗುವುದು ಎಂದಿದ್ದಾರೆ.

 

 

► Follow us on –  Facebook / Twitter  / Google+

Facebook Comments

Sri Raghav

Admin