ಹೆಂಡತಿ-ಮಕ್ಕಳನ್ನು ತವರಿಗೆ ಕಳುಹಿಸಿ ಗುಂಡು ಹಾರಿಸಿಕೊಂಡು ಎಸ್ಐ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

shoot

ಮೇದಕ್, ಆ.17- ಮನೆಯಲ್ಲಿ ಯಾರೂ ಇಲ್ಲದ ವೇಳೆ ಪೊಲೀಸ್ ಸಬ್ಇನ್ಸ್ಪೆಕ್ಟರ್ ಒಬ್ಬರು ತಮ್ಮ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯ ಕುಕೂನಾಪುರ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಎಸ್ಐ ಕೆ.ರಾಮಚಂದ್ರರೆಡ್ಡಿ (38) ಆತ್ಮಹತ್ಯೆಗೆ ಶರಣಾದ ಅಧಿಕಾರಿ.  ಇವರು ಕುಕೂನಾಪುರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಪತ್ನಿ, ಇಬ್ಬರು ಮಕ್ಕಳನ್ನು ತವರು ಮನೆಗೆ ಕಳುಹಿಸಿದ ಬಳಿಕ ತಮ್ಮ ಸರ್ವೀಸ್ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ. ಆದರೆ, ಮೇಲಧಿಕಾರಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೋ ಅಥವಾ ಕೊಲೆಯೋ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ತಿಳಿದುಬಂದಿಲ್ಲ.
ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin