ಅಕ್ರಮ ಮರಳು ಗಣಿಗಾರಿಕೆ : 2 ಟ್ರ್ಯಾಕ್ಟರ್ ವಶ

ಈ ಸುದ್ದಿಯನ್ನು ಶೇರ್ ಮಾಡಿ

arrested-2

ತುಮಕೂರು, ಆ.19- ನಗರದ ಲಕ್ಕಹಳ್ಳಿ ಕೆರೆಯಲ್ಲಿ ಅಕ್ರಮವಾಗಿ ಮರಳು ತುಂಬುತ್ತಿದ್ದ ಎರಡು ಟ್ರ್ಯಾಕ್ಟರ್‍ಗಳನ್ನು ಕಳ್ಳಂಬೆಳ್ಳ ಠಾಣೆ ಪೊಲೀಸರು ಇಂದು ವಶಪಡಿಸಿಕೊಂಡಿದ್ದಾರೆ.ಅಕ್ರಮವಾಗಿ ಮರಳು ತುಂಬುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕಳ್ಳಂಬೆಳ್ಳ ಠಾಣೆ ಪೊಲೀಸರು ಇಂದು ಬೆಳಗ್ಗೆ ಸ್ಥಳಕ್ಕೆ ದಿಢೀರ್ ದಾಳಿ ಮಾಡಿ ಮರಳು ತುಂಬಿದ್ದ ಎರಡು ಟ್ರ್ಯಾಕ್ಟರ್‍ಗಳನ್ನು ವಶಪಡಿಸಿಕೊಂಡಿದ್ದಾರೆ.ನಿನ್ನೆಯಷ್ಟೇ ಮರಳು ತುಂಬಿದ್ದ ಮೂರು ಲಾರಿಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಸಬ್‍ಇನ್ಸ್‍ಪೆಕ್ಟರ್ ಚಂದ್ರಶೇಖರ್ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

 

► Follow us on –  Facebook / Twitter  / Google+

 

Facebook Comments

Sri Raghav

Admin