ಬಂಧನದಿಂದ 6 ವಾರ ಬಚಾವ್ ಆದ ಶಶಿಕಲಾ

ಈ ಸುದ್ದಿಯನ್ನು ಶೇರ್ ಮಾಡಿ

Shashikalaa

ನವದೆಹಲಿ,ಆ.26- ಲೈಂಗಿಕ ಕಿರುಕುಳ ಪ್ರಕರಣವೊಂದರ ಸಂಬಂಧ ಎಐಎಡಿಎಂಕೆ ಉಚ್ಛಾಟಿತ ನಾಯಕಿ ಮತ್ತು ರಾಜ್ಯಸಭೆ ಸದಸ್ಯೆ ಶಶಿಕಲಾ ಪುಷ್ಪ ಅವರನ್ನು ಬಂಧಿಸದಂತೆ ಸುಪ್ರೀಂಕೋರ್ಟ್ ಆರು ವಾರಗಳ ರಕ್ಷಣೆ ನೀಡಿದೆ.   ತನ್ನ ಆದೇಶದಿಂದ ಪ್ರಭಾವಕ್ಕೆ ಒಳಗಾಗದೇ ಆಕೆಯ ನಿರೀಕ್ಷಣಾ ಜಾಮೀನು ಅರ್ಜಿಯ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ. ಮನೆಗೆಲಸದಾಕೆ ಮೇಲೆ ದೌರ್ಜನ್ಯ ಎಸಗಿ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಶಶಿಕಲಾ ಮತ್ತು ಕುಟುಂಬದ ಇಬ್ಬರು ಸದಸ್ಯರನ್ನು ಬಂಧಿಸದಂತೆ ದೆಹಲಿ ಹೈಕೋರ್ಟ್ ಕಳೆದ ವಾರ ಮಧ್ಯಂತರ ರಕ್ಷಣೆಯನ್ನು ನೀಡಿತ್ತು.

► Follow us on –  Facebook / Twitter  / Google+

Facebook Comments

Sri Raghav

Admin