ವೈಮಾನಿಕ ಉದ್ದಿಮೆ ನೀತಿಗೆ ತಿದ್ದುಪಡಿಯಿಂದ 10,584 ಉದ್ಯೋಗಗಳ ಸೃಷ್ಟಿ : ಜಯಚಂದ್ರ

ಈ ಸುದ್ದಿಯನ್ನು ಶೇರ್ ಮಾಡಿ

TBJ

ಬೆಂಗಳೂರು, ಆ.31- ರಾಜ್ಯದಲ್ಲಿ ವೈಮಾನಿಕ ಉದ್ದಿಮೆಗಳನ್ನು ಆಕರ್ಷಿಸುವ ಉದ್ದೇಶದಿಂದ ಕರ್ನಾಟಕ ವೈಮಾನಿಕ ನೀತಿ 2013-23ಕ್ಕೆ ತಿದ್ದುಪಡಿ ತರುವ ಬಗ್ಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.  ರಾಜ್ಯದಲ್ಲಿ ಒಟ್ಟು 14,520 ಕೋಟಿ ರೂ. ಬಂಡವಾಳ ಹೂಡಿಕೆಯ 33 ಪ್ರಸ್ತಾವನೆಗಳಿಗೆ ಅನುಮತಿ ದೊರೆತಿದೆ. ಇದರಿಂದ 10,584 ಉದ್ಯೋಗಗಳ ಸೃಷ್ಟಿಯಾಗಲಿದೆ ಎಂದು ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಹೇಳಿದರು. ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಯಚಂದ್ರ, ಜಾಗತಿಕ ಮಟ್ಟದಲ್ಲಿ ವೈಮಾನಿಕ ಉದ್ದಿಮೆಗಳನ್ನು ಆಕರ್ಷಿಸುವ ಉದ್ದೇಶ ಹೊಂದಲಾಗಿದೆ ಎಂದರು.

ಇದಕ್ಕಾಗಿ ಹಾಲಿ ಇರುವ ನೀತಿಗೆ ತಿದ್ದುಪಡಿ ತರಲಾಗುವುದು. ಕೈಗಾರಿಕಾ ನೀತಿಯಲ್ಲಿ ಉದ್ದಿಮೆಗಳಿಗೆ ದೊರೆಯುವ ಎಲ್ಲ ಸೌಲಭ್ಯಗಳು, ರಿಯಾಯ್ತಿಗಳು ವೈಮಾನಿಕ ಉದ್ದಿಮೆಗೂ ದೊರೆಯಲಿವೆ ಎಂದು ಸಚಿವರು ತಿಳಿಸಿದರು. ವೈಮಾನಿಕ ಉದ್ದಿಮೆಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ವಿಮಾನ ಮತ್ತು ಹೆಲಿಕಾಪ್ಟರ್ ಬಿಡಿ ಭಾಗಗಳ ನಿರ್ಮಾಣ ಕರ್ನಾಟಕದಲ್ಲಿ ಹೆಚ್ಚಾಗಿ ನಡೆಯುತ್ತಿವೆ ಎಂದು ತಿಳಿಸಿದರು.  ಅದೇ ರೀತಿ ಏಷ್ಯಾದಲ್ಲಿ ಏರೋಸ್ಪೇಸ್ ಹಬ್ ಶಾಶ್ವತವಾಗಿ ನೆಲೆಯೂರಬೇಕು. ಅದಕ್ಕಾಗಿ ಅಗತ್ಯ ತಿದ್ದುಪಡಿ ತರಲಾಗುವುದು ಮತ್ತು ಎಲ್ಲ ಕ್ರಮಗಳನ್ನೂ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಹೇಳಿದರು.

► Follow us on –  Facebook / Twitter  / Google+

Facebook Comments

Sri Raghav

Admin